ಒತ್ತಡ ಬದುಕಿಗೆ ಕ್ರೀಡೆ ಅಗತ್ಯ: ಜಿಲ್ಲಾಧಿಕಾರಿ

ಬಾಾಗಲಕೋಟೆ: ದೈನಂದಿನ ಕೆಲಸದ ಒತ್ತಡದಿಂದ ಹೊರಬರಲು ಕ್ರೀಡೆಗಳು ಸಹಕಾರಿಯಾಗಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು. 

ನವನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿಂದು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡ ವಾಷರ್ಿಕ ಕ್ರೀಡಾಕೂಟಗಳನ್ನು ಉದ್ಘಾಟಿಸಿ ಮಾತನಾಡಿದ ಅವರು ಬಿಡುವಿನ ಸಮಯದಲ್ಲಿ ವಾಕಿಂಗ್, ಶಟಲ್ ಹಾಗೂ ವಾಲಿಬಾಲ್ ಆಡುವುದನ್ನು ನಾವು ರೂಡಿಸಿಕೊಳ್ಳಬೇಕು. ಅಂದಾಗ ಮಾತ್ರ ದಿನನಿತ್ಯದ ಒತ್ತಡದಿಂದ ಹೊರಬರಲು ಸಾಧ್ಯವಾಗುತ್ತದೆ ಎಂದರು.

ಮಿಲಿಟರಿಯಲ್ಲಿದ್ದಾಗ ಕಾಶ್ಮೀರದಲ್ಲಿ ಅಧಿಕಾರಿಗಳು ಸೇರಿ ವಾಲಿಬಾಲ್ ಆಟವನ್ನು ಆಡುತ್ತಿದ್ದೇವು. ದೇಹಕ್ಕಾಗಿ ಇಂತಹ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವದರಿಂದ ಸದೃಡವಾದ ದೇಹಕ್ಕೆ ಸದೃಡವಾದ ಮನಸ್ಸು ಬಂದಂತಾಗುತ್ತದೆ. 

ಆದ್ದರಿಂದ ಪ್ರತಿಯೊಂಬರು ಇತರೆ ಚಟುವಟಿಕೆಗಳನ್ನು ರೂಡಿಸಿಕೊಳ್ಳಲು ತಿಳಿಸಿದರು. ಪೊಲೀಸ್ ಇಲಾಖೆ ಪ್ರತಿ ವರ್ಷ ಕ್ರೀಡಾಕೂಟಗಳನ್ನು ಏರ್ಪಡಿಸುವದರಿಂದ ಮನಸ್ಸಿಗೆ ಉಲ್ಲಾಸ ತಂದಂತಾಗುತ್ತದೆ ಎಂದರು. 

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಸೇರಿದಂತೆ ಇತರರು ಉಪಸ್ಥಿತರಿದ್ದರು. ನಂತರ ವಿವಿಧ ಕ್ರೀಡಾಕೂಟಗಳು ಜರುಗಿದವು.