ಕ್ರೀಡೆಗಳು ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ: ಫಯಾಜ್ ಕಲಾದಗಿ
Sports are helpful for personality development: Fayyaz Kaladagi
ಲೋಕದರ್ಶನ ವರದಿ
ವಿಜಯಪುರ 22: ಕ್ರೀಡಾ ಚಟುವಟಿಕೆಗಳು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯ ಜೊತೆಗೆ ಶಿಸ್ತು, ಸಹಕಾರ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದು ಸಮಾಜ ಸೇವಕ ಫಯಾಜ್ ಕಲಾದಗಿ ಹೇಳಿದರು. ನಗರದಲ್ಲಿ ಟಿಪ್ಪು ಪಿಜನ್ ಕ್ಲಬ್ ವತಿಯಿಂದ ಆಯೋಜಿಸಿದ್ದ 2026ನೇ ಸಾಲಿನ ಟಿಪ್ಪು ಪಿಜನ್ ಪಾರಿವಾಳ ಹಾರಾಟ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಇಂದಿನ ಯುವಜನರು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ತೋರಬೇಕಿದ್ದು, ಇಂತಹ ಸ್ಪರ್ಧೆಗಳು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪೂರಕವಾಗಿವೆ ಎಂದು ಹೇಳಿದರು.
ಕ್ರೀಡೆಗಳಿಂದ ದೇಹ ಸದೃಢವಾಗುವುದರ ಜೊತೆಗೆ ಮಾನಸಿಕ ನೆಮ್ಮದಿ ಹಾಗೂ ಆತ್ಮವಿಶ್ವಾಸವೂ ವೃದ್ಧಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಟಿಪ್ಪು ಪಿಜನ್ ಕ್ಲಬ್ ಹಲವು ವರ್ಷಗಳಿಂದ ಪಾರಿವಾಳ ಹಾರಾಟ ಸ್ಪರ್ಧೆಗಳನ್ನು ಯಶಸ್ವಿಯಾಗಿ ಆಯೋಜಿಸುತ್ತಿದ್ದು, ಕ್ರೀಡಾಸ್ಫೂರ್ತಿ ಮತ್ತು ಸ್ನೇಹ-ಸೌಹಾರ್ದವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆಗೈದ ಯಾಸೀನ್ ಸೋಲಾಪುರ ಪ್ರಥಮ ಬಹುಮಾನ, ಲಾಲಸಾಬ ಲೋಣಿ ದ್ವಿತೀಯ ಬಹುಮಾನ ಹಾಗೂ ಹುಸೇನ ಅತ್ತಾರ ತೃತೀಯ ಬಹುಮಾನ ಪಡೆದುಕೊಂಡರು. ವಿಜೇತರಿಗೆ ಗಣ್ಯರು ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ವಿತರಿಸಿ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಸೈನಿಕ ಶಂಕರ ಹಾರಿವಾಳ, ಹಿರಿಯ ತರಬೇತಿದಾರರಾದ ಜಬ್ಬಾರ ಪಟೇಲ್, ಇಲಿಯಾಸ್ ಪಟೇಲ್, ಮುಜಾವರ್ ಸೇರಿದಂತೆ ಹಲವಾರು ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಆರಿಫ್, ಸಲೀಮ್, ಗಫೂರ್, ನವೀದ್ ಹಾಗೂ ಕ್ಲಬ್ನ ಸದಸ್ಯರು, ಕ್ರೀಡಾಭಿಮಾನಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 