ಲೋಕದರ್ಶನ ವರದಿ
ಶಿರಹಟ್ಟಿ 14: ಯಾವ ದೇಶ ಆರೋಗ್ಯವಂತ ನಾಗರಿಕರನ್ನು ಹೆಚ್ಚು ಹೊಂದಿರುತ್ತದೆಯೋ ಆ ದೇಶ ಇಡೀ ಪ್ರಪಂಚದಲ್ಲಿ ಅತ್ಯಂತ ಶ್ರೀಮಂತ ಹಾಗೂ ಅಭಿವೃದ್ಧಿ ಶೀಲ ರಾಷ್ಟ್ರವಾಗಿ ಹೊರಹೊಮ್ಮುತ್ತದೆ. ಆದ್ದರಿಂದ ದೇಶವಾಸಿಗಳು ನಿತ್ಯ ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದರ ಮೂಲಕ ಆರೋಗ್ಯವಂತ ಸಮಾಜ ನಿಮರ್ಿಸುವಲ್ಲಿ ಶ್ರಮಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.
ಅವರು ಸ್ಥಳೀಯ ಎಸ್.ಎಂ. ಡಬಾಲಿ ತಾಲೂಕು ಕ್ರೀಡಾಂಗಣದಲ್ಲಿ ಫಕ್ಕೀರಪ್ಪ ಭರಮಪ್ಪ ಪೂಜಾರ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಶುಕ್ರವಾರ ತಾಲೂಕು ಮಟ್ಟದ ಕ್ರೀಡಾಕೂಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಒಬ್ಬ ವ್ಯಕ್ತಿ ಜೀವನದಲ್ಲಿ ಉತ್ತಮ ಸಾಧನೆ ಮಾಡಬೇಕಾರೆ. ಶ್ರದ್ಧೆ, ತಾಳ್ಮೆ, ನಿರಂತರ ಪರಿಶ್ರಮದ ಜೊತೆಗೆ ಆರೋಗ್ಯ ಬಹಳ ಮುಖ್ಯವಾಗುತ್ತದೆ. ಆದ್ದರಿಂದ ವಿದ್ಯಾಥರ್ಿಗಳು ದೈಹಿಕ ಹಾಗೂ ಮಾನಸಿಕವಾಗಿ ಸದೃಡರಾಗಲು ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು. ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ. ಆದರೆ ಗೆಲುವು ಕಂಡಾಗ ಹಿಗ್ಗದೆ, ಸೋಲು ಕಂಡಾಗ ಕುಗ್ಗದೆ, ಸಮತೋಲದಿಂದ ಕಾಯಿದುಕೊಂಡು ಕ್ರೀಡೆಯಲ್ಲಿ ಯಶಸ್ಸು ಸಾಧಿಸಬೇಕು ಎಂದು ಹೇಳಿದರು.
ಭಾರತ ದೇಶದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಮಹತ್ವ ಕೊಡುತ್ತಿಲ್ಲ. ಇದರಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕ್ರೀಡಾ ಸಾಧನೆ ಅತ್ಯಂತ ಕಳೆಪೆಯಾಗುತ್ತಿದೆ ಮತ್ತು ರಾಜ್ಯದಲ್ಲಿ 1 ಸಾವಿರಕ್ಕೂ ಅಧಿಕ ಪದವಿ ಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರ ಕೊರತೆ ಇದೆ. ಇದರಿಂದ ವಿದ್ಯಾಥರ್ಿಗಳಿಗೆ ರಾಷ್ಟ್ರ ಹಾಗೂ ಅಂತರಾಷ್ಟ್ರ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ರಾಜ್ಯ ಸರಕಾರ ಕೂಡಲೇ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಹಾಗೂ ಪ್ರಥಮ ದಜರ್ೆ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರನ್ನು ನೇಮಕ ಮಾಡಿಕೊಂಡು ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಹಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪಣ್ಣ ಕೊಂಚಿಗೇರಿ, ಮಹೇಶ ಲಮಾಣಿ, ತಹಶೀಲ್ದಾರ ಯಲ್ಲಪ್ಪ ಗೋಣೆಣ್ಣವರ, ಮಂಜುನಾಥ ಕೊಕ್ಕರಗುಂದಿ, ಮಹೇಶ ಭಜಂತ್ರಿ, ಎಚ್.ಎಂ. ದೇವಗಿರಿ,ಫಕ್ಕೀರೇಶ ರಟ್ಟಿಹಳ್ಳಿ, ಲಕ್ಷ್ಮಣ ಬಾರಬಾರ, ಪರಶುರಾಮ ಡೊಂಕಬಳ್ಳಿ, ರಾಜೇಶ್ವರ ಕಪ್ಪತ್ತನವರ, ಪ್ರೀಯಾಂಕ ಬೊಮ್ಮಯನವರ, ಎಲ್.ಎಸ್. ದೊಡ್ಡಮನಿ, ಎಂ.ಕೆ. ಲಮಾಣಿ ಸೇರಿದಂತೆ ನೂರಾರು ವಿದ್ಯಾಥರ್ಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.