ದೈಹಿಕ ಮಾನಸಿಕ ಸದೃಢತೆಗೆ ಕ್ರೀಡೆ ಅಗತ್ಯ: ಪಿಕಾರ್ಡ್ ಬ್ಯಾಂಕ ಅಧ್ಯಕ್ಷ ಹಿರೇಮಠ

ಲೋಕದರ್ಶನ ವರದಿ

ಕೊಪ್ಪಳ 22:  ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ದೈಹಿಕ ಮಾನಸಿಕ ಸದೃಢತೆಗೆ ಕ್ರೀಡೆ ಅಗತ್ಯವಾಗಿದೆ ಎಂದು ಯಲಬುರ್ಗಾ ಪಿಕಾರ್ಡ್  ಬ್ಯಾಂಕ ಅಧ್ಯಕ್ಷ ಚಂದ್ರಶೇಖರಯ್ಯ ಹಿರೇಮಠ ಭಾನಾಪುರ ಹೇಳಿದರು.

ಅವರು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಾರ್ಯಾಲಯ,ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಕೊಪ್ಪಳ ವತಿಯಿಂದ ಆಯೋಜಿಸಿದ್ದ ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹ್ಯಾಂಡ್ಬಾಲ್ ಕ್ರೀಡಾಕೂಟಕ್ಕೆ ಚಾಲನೆ ಮಾತನಾಡಿ ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಬೇಕು,ಇಂಥಹ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೋಳ್ಳುವುದೇ ಸಾಧನೆ ಹೀಗಾಗಿ ಇಲ್ಲಿ ಸೋಲು-ಗೆಲುವು ಮುಖ್ಯವಲ್ಲ ಕ್ರೀಡಾ ಮನೋಭಾವನೆಯಿಂದ ಭಾಗವಹಿಸಬೇಕು ಎಂದು ಶುಭಾ ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜ್ಸ್ವಾಮಿ ಮಾತನಾಡಿ ವಿದ್ಯಾಥರ್ಿಗಳು ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯದ ಹೆಸರು ರಾಷ್ಟ್ರಮಟ್ಟದಲ್ಲಿ ತರಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ದೈಹಿಕ ಪರಿವೀಕ್ಷಕ ಎ.ಬಸವರಾಜ, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವಿಠ್ಠಲ ಬೈಲವಾಡ, ತಾಲೂಕಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವೀರಭದ್ರಯ್ಯ ಪ್ರಜಾರ, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ವಿರೂಪಾಕ್ಷಪ್ಪ ವಿರೂಪಾಕ್ಷಪ್ಪ ಬಾಗೋಡಿ ಸೇರಿದಂತೆ ರಾಜ್ಯದ ಕಲುಬುರಗಿ, ಬೆಳಗಾವಿ,ಬೆಂಗಳೂರು, ಮೈಸೂರು ವಿಭಾಗಗಳ 16 ತಂಡಗಳು ಭಾಗವಹಿಸಿದ್ದವು