ಕ್ರೀಡಾ ಪಟುಗಳಿಗೆ ಪ್ರೋತ್ಸಾಹ ಅಗತ್ಯ: ಅಶೋಕ ಅಂಗಡಿ
Sportspersons need encouragement: Ashoka Angadi
ರಾಯಬಾಗ, 26 ; ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವುದರ ಮೂಲಕ ಕ್ರೀಡಾಕೂಟಗಳನ್ನು ಬೆಳೆಸಬೇಕೆಂದು ಪ.ಪಂ.ಅಧ್ಯಕ್ಷ ಅಶೋಕ ಅಂಗಡಿ ಹೇಳಿದರು.
ಮಂಗಳವಾರ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಳಗಾವಿ ಶಾಲಾ ಶಿಕ್ಷಣ ಇಲಾಖೆ ರಾಯಬಾಗ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಲ್ಲಿನ ಕ್ರೀಡಾ ಪಟುಗಳು ರಾಜ್ಯಮಟ್ಟದ ದಸರಾ ಕ್ರೀಡಾಕೂಟದಲ್ಲಿ ಜಯಗಳಿಸಿ, ತಾಲೂಕಿನ ಕೀರ್ತಿಯನ್ನು ಹೆಚ್ಚಿಸಬೇಕೆಂದರು.
ರಾಯಬಾಗ ಗ್ರಾಮೀಣ ಗ್ರಾ.ಪಂ.ಅಧ್ಯಕ್ಷೆ ಮಹಾದೇವಿ ದೀಪಾಳೆ, ಉಪಾಧ್ಯಕ್ಷೆ ಬೇಗಂ ಶಿಂಗೆ, ಪ.ಪಂ.ಸದಸ್ಯ ಸುರೇಶ ಮಾಳಿ, ಕ್ರೀಡಾ ಇಲಾಖೆ ತಾಲೂಕಾಧಿಕಾರಿ ಸಂಜೀವಕುಮಾರ ನಾಯಿಕ, ತಾಲೂಕು ದೈಹಿಕ ಶಿಕ್ಷಣ ಪರೀವೀಕ್ಷಕ ಮಾಹಾವೀರ ಜೀರಗ್ಯಾಳ, ಬಿ.ಆರಿ್ಸ ಬಸವರಾಜ ಕಾಂಬಳೆ, ಎಲ್.ಬಿ.ಬನಶಂಕರಿ , ಜೆಡ್.ಆರ್ ಮುಲ್ಲಾ, ರಾಜು ಅರಬಳ್ಳಿ, ವ್ಹಿ.ಡಿ.ಉಪಾಧ್ಯೆ ಹಾಗೂ ದೈಹಿಕ ಶಿಕ್ಷಕರು ಮತ್ತು ಕ್ರೀಡಾ ಪಟುಗಳು ಇದ್ದರು
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 