ಸಮೀರವಾಡಿ-ಸೈದಾಪುರದಲ್ಲಿ ಶ್ರೀ ಬಸವಣ್ಣನ ಜಾತ್ರೆ
Sri Basavanna Jatra at Sameerawadi-Saidapur
ರಬಕವಿ-ಬನಹಟ್ಟಿ 16 : ಸಮೀರವಾಡಿ-ಸೈದಾಪುರ ಗ್ರಾಮದ ಬಸವಣ್ಣನ ಜಾತ್ರೆ ಆ.17ರಂದು ಶ್ರಾವಣ ಮಾಸದ ಸೋಮವಾರ ಸಕಲ ಮಂಗಲ ಕಾರ್ಯಗಳೊಂದಿಗೆ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ಅಭಿಷೇಕ ಹಾಗೂ ಮಹಾಪೂಜೆ ನೆರವೇರಲಿದ್ದು, ಮಧ್ಯಾಹ್ನ 11.30ಕ್ಕೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಜಾತ್ರೆಯಲ್ಲಿ ಗ್ರಾಮದ ಗುರುಹಿರಿಯರು, ರೈತರು, ವ್ಯಾಪಾರಸ್ಥರು, ಗೋದಾವರಿ ಸಕ್ಕರೆ ಕಾರ್ಖಾನೆ, ಕೋ-ಜನ ಹಾಗೂ ಎಸ್‌ಒಸಿ ಅಧಿಕಾರಿಗಳು ಮತ್ತು ಕಾರ್ಮಿಕರು, ಮಹಿಳೆಯರು, ಶಾಲಾ ಮಕ್ಕಳು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿ ಬಸವಣ್ಣನ ಕೃಪೆಗೆ ಪಾತ್ರರಾಗುವಂತೆ ಬಸವಣ್ಣ ಸೇವಾ ಸಮಿತಿ ಮನವಿ ಮಾಡಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 