ತಹಶೀಲ್ದಾರ ಕಚೇರಿ ಸಭಾ ಭವನದಲ್ಲಿ ಶ್ರೀ ಗೌತಮ ಬುದ್ಧ ಜಯಂತಿ ಕಾರ್ಯಕ್ರಮ

ತಹಶೀಲ್ದಾರ ಕಚೇರಿ ಸಭಾ ಭವನದಲ್ಲಿ ಶ್ರೀ ಗೌತಮ ಬುದ್ಧ ಜಯಂತಿ ಕಾರ್ಯಕ್ರಮ Sri Gautam Buddha Jayanti program at Tahsildar's office Sabha Bhavan

ಯರಗಟ್ಟಿ 01:  ಪಟ್ಟಣದ  ತಹಶೀಲ್ದಾರ ಕಚೇರಿ ಸಭಾ ಭವನದಲ್ಲಿ ಶ್ರೀ ಗೌತಮ ಬುದ್ಧರ ಜಯಂತಿ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಗಣ್ಯರು ಬುದ್ಧರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ವ್ಯಕ್ತಪಡಿಸಿದರು.ಈ ವೇಳೆ ಮಾತನಾಡಿದ ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೋಳ ಬುದ್ಧರ ಶಾಂತಿ, ಕರುಣೆ ಮತ್ತು ಸಮಾನತೆಯ ಸಂದೇಶಗಳು ಇಂದಿಗೂ ಜಗತ್ತಿನಾದ್ಯಂತ ಮಹತ್ವ ಪಡೆದಿವೆ ಎಂದು ಹೇಳಿದರು. ಬುದ್ಧರ ತತ್ವಗಳು ಕೇವಲ ಆಚರಣೆಗೆ ಸೀಮಿತವಾಗದೇ, ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಅವರು ಒತ್ತಿ ಹೇಳಿದರು.

ವೀರಶೈವ ಲಿಂಗಾಯತ ಯುವ ವೇದಿಕೆ ಜಿಲ್ಲಾ ಕಾರ್ಯಾಧ್ಯಕ್ಷ ಈರಣ್ಣಾ ಹೂಲ್ಲೂರ ಮಾತನಾಡಿ, ಬುದ್ಧರು ಮಾನವೀಯ ಮೌಲ್ಯಗಳ ಪ್ರತೀಕವಾಗಿದ್ದು, ಅವರ ಸಂದೇಶಗಳು ಜಗತ್ತಿನಲ್ಲಿ ಶಾಂತಿ ನೆಲೆಸಲು ಕಾರಣವಾಗಿವೆ ಹಾಗೂ ಸಮಾಜದಲ್ಲಿ ಶಾಂತಿ ಮತ್ತು ಸಮಾನತೆ ಸ್ಥಾಪನೆಗೆ ಬುದ್ಧರ ಚಿಂತನೆಗಳನ್ನು ಅನುಸರಿಸುವುದು ಅವಶ್ಯಕ ಎಂದು ಹೇಳಿದರು.ಈ ಸಂದರ್ಭದಲ್ಲಿ ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಎಪಿಎಂಸಿ ಸದಸ್ಯ ರಫೀಕ ಡಿಕೆ, ಫಿರೋಜ ಖಾದ್ರಿ, ಸ್ವರೂಪ ಚಪಳಿ, ಮಂಜುನಾಥ ಬಡಿಗೇರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.