ಅಮೃತ ಮಹೋತ್ಸವಕ್ಕೆ ಶ್ರೀ ಕಾತ್ಯಾಯನಿ ಪ್ರೌಢಶಾಲೆ ಸಜ್ಜು
Sri Katyayani High School gears up for Amrutha Mahotsava
ಕಾರವಾರ 08: ತಾಲೂಕಿನ ಅವರ್ಸಾದ ಶ್ರೀ ಕಾತ್ಯಾಯನಿ ಪ್ರೌಢಶಾಲೆ 75ನೇ ವರ್ಷದ ಅಮೃತ ಮಹೋತ್ಸವವನ್ನು ಡಿಸೆಂಬರ್ 26ರಿಂದ 28ರವರೆಗೆ ಮೂರು ದಿನಗಳ ಕಾಲ ವೈಭವದಿಂದ ಆಚರಿಸಲು ಸಜ್ಜಾಗಿದೆ ಎಂದು ನಿವೃತ್ತ ಮುಖ್ಯಾಧ್ಯಾಪಕ ಡಿ.ಆರ್. ಹಿಚ್ಕಡ ತಿಳಿಸಿದರು.
ನಗರ ಪತ್ರಿಕಾಭವನದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಡಿ. 26ರಂದು ಸಂಜೆ 4 ಗಂಟೆಗೆ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅಮೃತ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆ ವಹಿಸಲಿದ್ದು, ಶಾಸಕರಾದ ಸತೀಶ್ ಸೈಲ್, ಐಸಿಎಂಆರ್ ಮಾಜಿ ನಿರ್ದೇಶಕಿ ಡಾ. ಸ್ಮಿತಾ ಡಿ. ಮಹಾಲೆ, ಕೆಎಲ್‌ಇ ತಾಂತ್ರಿಕ ಮಹಾವಿದ್ಯಾಲಯದ ಉಪಕುಲಪತಿ ಡಾ. ಪ್ರಕಾಶ ತೆವರಿ ಮುಖ್ಯ ಅತಿಥಿಗಳಾಗಲಿದ್ದಾರೆ ಎಂದರು. ಕಾರ್ಯಕ್ರಮದ ಅಂಗವಾಗಿ ‘ಜ್ಞಾನಮೃತ’ ಎಂಬ ಸ್ಮರಣ ಸಂಚಿಕೆ ಬಿಡುಗಡೆಯಾಗಲಿದೆ. ರಾತ್ರಿ 8.30ಕ್ಕೆ ಸ್ಥಳೀಯ ಪ್ರತಿಭಾವಂತರಿಂದ ನೃತ್ಯ ಕಾರ್ಯಕ್ರಮ ಜರುಗಲಿದೆ. ಡಿ. 27 ಸಂಜೆ 4 ಗಂಟೆಗೆ ನಡೆಯುವ ಸನ್ಮಾನ ಸಮಾರಂಭದಲ್ಲಿ ಸಲಹಾ ಸಮಿತಿ ಅಧ್ಯಕ್ಷ ಮಂಗಲದಾಸ ಕಾಮತ ಉಪಸ್ಥಿತರಿದ್ದು, ಎಂಎಲ್ಸಿ ಗಣಪತಿ ಉಳ್ವೇಕರ್, ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್ಸಿ ಯಲ್ಲಿ ಪ್ರಥಮ ಸ್ಥಾನ ಪಡೆದ ಈವರೆಗಿನ ಬ್ಯಾಚಿನ ವಿದ್ಯಾರ್ಥಿಗಳು, ಶಾಲಾ ಆಡಳಿತ ಮಂಡಳಿ ಸದಸ್ಯರು, ಹಳೆಯ ಮತ್ತು ಹಾಲಿ ಶಿಕ್ಷಕರು ಹಾಗೂ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲು ನಿರ್ಧರಿಸಲಾಗಿದೆ. ಡಿ.28 ರವಿವಾರ ರಂದು ಸಂಜೆ 4ಕ್ಕೆ ನಡೆಯುವ ಸಮಾರೋಪ ಸಮಾರಂಭಕ್ಕೆ ಮಾಜಿ ಶಾಸಕಿ ರೂಪಾಲಿ ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಿತಿ ಅಧ್ಯಕ್ಷ ರಾಜನ್ ವಾಮನ ಅಣ್ವೇಕರ, ಜವಾಹರಲಾಲ್ ನೆಹರು ಪೋರ್ಟ್ ಟ್ರಸ್ಟ್‌ನ ನಿವೃತ್ತ ಸಿಇಓ ರವೀಂದ್ರ ರೇವಣಕರ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.
ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಎಂ.ಎಸ್. ಪ್ರಭು, ಉಪಾಧ್ಯಕ್ಷ ತುಳಸಿದಾಸ ಕಾಮತ, ಖಜಾಂಚಿ ವಿನಾಯಕ ಕಾಮತ, ಕಾತ್ಯಾಯನಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎನ್.ವಿ. ರೇವಣಕರ, ಉಪಾಧ್ಯಕ್ಷ ಉಲ್ಲಾಸ ಜಿ. ರೇವಣಕರ, ಮುಖ್ಯಾಧ್ಯಾಪಕ ಗಂಗಾಧರ ಸಿ. ನಾಯ್ಕ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 