ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ  Sri Krishna Janmashtami Celebrations at Swami Vivekananda School

ಲೋಕದರ್ಶನ ವರದಿ  

ಕಂಪ್ಲಿ, ಸೆ.04: ಪಟ್ಟಣದ ಕೋಟೆ ಪ್ರದೇಶದಲ್ಲಿರುವ ಶ್ರೀ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಶುಕ್ರವಾರ ಸಂಭ್ರಮ, ಸಡಗರ ಹಾಗೂ ಸಾಂಪ್ರದಾಯಿಕ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.  

ಮುಖ್ಯಗುರು ಬಡಿಗೇರ್ ಜಿಲಾನಸಾಬ್ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳ ಆಚರಣೆ ಸೌಹಾರ್ದತೆ ಹಾಗೂ ನೈತಿಕ ಮೌಲ್ಯಗಳನ್ನು ಬೆಳೆಸುತ್ತದೆ. ವಿದ್ಯಾರ್ಥಿ ದೆಸೆಯಲ್ಲಿಯೇ ಮಕ್ಕಳಿಗೆ ಇಂತಹ ಸಾಂಸ್ಕೃತಿಕ ಹಿನ್ನೆಲೆಯ ಪರಿಚಯ ಮಾಡಿಸುವುದು ಇಂದಿನ ಅಗತ್ಯವಾಗಿದೆ ಎಂದು ಹೇಳಿದರು.  

ರಾಧೆ-ಕೃಷ್ಣರ ವೇಷಭೂಷಣ ಆಕರ್ಷಣೆ  

ಹಬ್ಬದ ಅಂಗವಾಗಿ ಶಾಲೆಯ ಪುಟಾಣಿ ಮಕ್ಕಳು ಶ್ರೀಕೃಷ್ಣ ಹಾಗೂ ರಾಧೆಯರ ಆಕರ್ಷಕ ವೇಷಭೂಷಣ ಧರಿಸಿ ಎಲ್ಲರ ಗಮನ ಸೆಳೆದರು. ಮಕ್ಕಳ ಮುದ್ದಾದ ನೃತ್ಯ ಹಾಗೂ ಸಡಗರದ ಸಂಭ್ರಮ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.  

ಈ ಸಂದರ್ಭದಲ್ಲಿ ಶಿಕ್ಷಕಿಯರಾದ ಕೆ. ಶ್ವೇತಾ, ಜೆ. ಅಕ್ಷತಾ, ಕೊಲ್ಕರ್ ಉಮಾ, ವರ್ಷಾ ಮಜುಂದಾರ್, ಮಠದ ಸುನೀತಾ, ಡಿ. ಉಮಾ, ಖಾಜಾಬೀ ಹಾಗೂ ಸಹಾಯಕಿ ಶರ್ಮಾಸಬಿ, ಕಂಪ್ಯೂಟರ್ ತರಬೇತಿ ಕೇಂದ್ರದ ಶಿಕ್ಷಕಿಯರಾದ ಸುಧಾ ಮತ್ತು ಲಾವಣ್ಯ ಸೇರಿದಂತೆ ಶಾಲೆಯ ಎಲ್ಲ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.