ಶ್ರೀ ಕೃಷ್ಣ ಜಯಂತಿ ಆಚರಣೆ

ಶ್ರೀ ಕೃಷ್ಣ ಜಯಂತಿ ಆಚರಣೆ Sri Krishna Jayanti Celebration

ಲೋಕದರ್ಶನ ವರದಿ 

ಹಾವೇರಿ:ಸೆ.04: ಶ್ರೀ ಕೃಷ್ಣ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಶ್ರೀ ಕೃಷ್ಣನ  ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು. ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ.ಮೈದೂರ ಹಾಗೂ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಶ್ರೀ ಕೃಷ್ಣನ  ಭಾವಚಿತ್ರಕ್ಕೆ ಪುಷ್ಪಾರ್ಚನೆ  ಮಾಡಿದರು. ವಿವಿಧ ಇಲಾಖೆ ಅಧಿಕಾರಿಗಳು, ಸಮಾಜ ಬಾಂಧವರು ಭಾಗವಹಿಸಿದ್ದರು.