ಶುಕ್ರವಾರ ಶ್ರೀಲಂಕಾ ಪ್ರಧಾನಿ ರಣಿಲ್ ಕೊಲ್ಲೂರು ಭೇಟಿ ಹಿನ್ನೆಲೆ: ಬಿಗಿ ಭದ್ರತೆ

ಉಡುಪಿ, ಜುಲೈ ೨೬ ಶ್ರೀಲಂಕಾ ಪ್ರಧಾನಿ ರಣಿಲ್ ವಿಕ್ರಮ ಸಿಂಘೆ ಶುಕ್ರವಾರ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಭಾರಿ ಬಿಗಿ ಭದ್ರತೆಯ ವ್ಯವಸ್ಥೆ ಕಲ್ಪಿಸಲಾಗಿದೆ. 

ಮಂಗಳೂರಿನಿಂದ ಕೊಲ್ಲೂರಿಗೆ ರಸ್ತೆ ಮಾರ್ಗದ ಮೂಲಕ ವಿಕ್ರಮ ಸಿಂಘೆ ಪ್ರಯಾಣ ಬೆಳೆಸಲಿದ್ದಾರೆ. ದೇವಿಯ ದರ್ಶನದ ನಂತರ ನವಚಂಡಿಯಾಗದ ಪೂರ್ಣಾಹುತಿಯಲ್ಲಿ ಅವರು ಭಾಗವಹಿಸಲಿದ್ದಾರೆ. 

ನಾಳೆ ಬೆಳಗ್ಗೆ 9ರಿಂದ ಮಧ್ಯಾಹ್ನ 2ವರೆಗೆ ಕೊಲ್ಲೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಸತಿ ಸಮುಚ್ಚಯ ಸಂಪೂರ್ಣ ಬಂದ್ ಇರಲಿದೆ. 

ಅಲ್ಲದೇ, ವಾಹನಸಂಚಾರ ಸಹಿತ ಪಾದಚಾರಿಗಳ ಸಂಚಾರಕ್ಕೂ ನಿರ್ಬಂಧ ಹೇರಲಾಗಿದೆ.