ಚೆಂಡು ವಿರೂಪ: ಲಂಕಾ ನಾಯಕ ದಿನೇಶ್ ಕೋಚ್ ಚಂಡಿಕಾಗೆ ನಿಷೇಧದ ಶಿಕ್ಷೆ
ದುಬೈ 16: ವೆಸ್ಟ್ ಇಂಡೀಸ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಚೆಂಡು ವಿರೂಪಗೊಳಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶ್ರೀಲಂಕಾ ನಾಯಕ ದಿನೇಶ್ ಚಾಂಡಿಮಾಲ್, ಕೋಚ್ ಚಂಡಿಕಾ ಹತುರುಸಿಂಘೆ ಹಾಗೂ ಮ್ಯಾನೇಜರ್ ಅಸಂಕ ಗುರುಸಿನ್ಹಾ ಅವರಿಗೆ ನಾಲ್ಕು ಏಕದಿನ ಪಂದ್ಯ ಹಾಗೂ ಎರಡು ಟೆಸ್ಟ್ ಪಂದ್ಯಗಳಿಗೆ ನಿಷೇಧ ಹೇರಲಾಗಿದೆ.
ವೆಸ್ಟ್ ಇಂಡೀಸ್ ಹಾಗೂ ಶ್ರೀಲಂಕಾ ನಡುವಣ ಟೆಸ್ಟ್ ಪಂದ್ಯದ ವೇಳೆ ದಿನೇಶ್ ಚಂಡಿಮಾಲ್ ಅವರು ಚೆಂಡಿನ ಸ್ವರೂಪವನ್ನು ಬದಲಾವಣೆ ಮಾಡುವ ಮೂಲಕ ಐಸಿಸಿ ನೀತಿ ಸಂಹಿತೆಯ ಆಟರ್ಿಕಲ್ 2.2.9 ರ ಉಲ್ಲಂಘನೆ ಮಾಡಿದ್ದಾರೆ ಎಂದು ಐಸಿಸಿ ಹೇಳಿದೆ.
ಐಸಿಸಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಈ ಮೂವರಿಗೆ ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕು ಏಕದಿನ ಹಾಗೂ ಎರಡು ಟೆಸ್ಟ್ ಪಂದ್ಯಗಳಿಗೆ ನಿಷೇಧ ಹೇರಲಾಗಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ದ್ವಿತೀಯ ದಿನದಾಟದ ಅಂತ್ಯದಲ್ಲಿ ಶ್ರೀಲಂಕಾ ಕ್ರಿಕೆಟಿಗರು ಚೆಂಡು ವಿರೂಪಗೊಳಿಸಿದ್ದಾರೆ ಎಂದು ಅಂಪೈರ್ ಅಲೀಮ್ ದಾರ್ ಹಾಗೂ ಇಯಾನ್ ಗೊಲ್ಡ್ ಶಂಕೆ ವ್ಯಕ್ತಪಡಿಸಿದ್ದರು.
ಈಗಾಗಲೇ ಬಾಲ್ ಟ್ಯಾಂಪರಿಂಗ್ ನಡೆಸಿದ ಆರೋಪದ ಮೇಲೆ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್ ಹಾಗೂ ಕ್ಯಾಮರಾನ್ ಬೆನ್ ಕ್ರಾಫ್ಟ್ ನಿಷೇಧದ ಶಿಕ್ಷೆ ಅನುಭವಿಸುತ್ತಿದ್ದಾರೆ.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 