ಆ. 18ರಂದು ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವ

ಆ. 18ರಂದು ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವ  Sri Mahalakshmi Devi Jatra Mahotsava on August 18


ತಾಳಿಕೋಟಿ 17 : ಪಟ್ಟಣದ ಗಣೇಶ ನಗರದ ಕೆಇಬಿ ಕಚೇರಿ ಹಿಂಭಾಗದಲ್ಲಿರುವ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವವು ಆಗಸ್ಟ್‌ 18ರಂದು ಮಂಗಳವಾರ ನಡೆಯಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಬೆಳಿಗ್ಗೆ 8 ಗಂಟೆಗೆ ಗಂಗಸ್ಥಳ, 11 ಗಂಟೆಗೆ ಹೋಮ-ಹವನ ಹಾಗೂ ಮಹಾಪೂಜೆ ನಡೆಯಲಿದೆ. ಮಧ್ಯಾಹ್ನ 12 ಗಂಟೆಯಿಂದ ಭಕ್ತರಿಗೆ ಮಹಾಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು   ಮಹಾಲಕ್ಷ್ಮಿ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.