ಹಾವೇರಿ ಜ.16: ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಸಮಾಜದ ಬೇಡಿಕೆಗಳಿಗೆ ಸಕರ್ಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ಗೃಹ, ಸಹಕಾರ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಜಿಲ್ಲೆಯ ಸುಕ್ಷೇತ್ರ ನರಸೀಪುರದಲ್ಲಿ ಬುಧವಾರ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ ಶರಣ ಸಂಸ್ಕೃತಿ ಉತ್ಸವ, ವಚನ ಮಹಾರಥೋತ್ಸವ, ಶ್ರೀ ನಿಜಶರಣ ಅಂಬಿಗರಚೌಡಯ್ಯನವರ 900ನೇ ಜಯಂತ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
ಅಂಬಿಗರ ಚೌಡಯ್ಯ ಸಮಾಜದ ಅಭಿವೃದ್ಧಿಗೆ ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರು ಅನುದಾನವನ್ನು ಒದಗಿಸುತ್ತ ಬಂದಿದ್ದಾರೆ. ಸಮಾಜದ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಲಿದೆ. ಸಮಾಜದಲ್ಲಿ ತುಳಿತಕ್ಕೆ ಒಳಗಾದವರಿಗೆ ನ್ಯಾಯ ಸಿಕ್ಕಾಗ ಸಾಮಾಜಿಕ ನ್ಯಾಯ ಸಿಕ್ಕಂತಾಗುತ್ತದೆ ಎಂದು ಹೇಳಿದರು.
ಶಾಸಕ ನೇಹರು ಓಲೆಕಾರ ಅವರು ಮಾತನಾಡಿ, ನಿಜಶರಣ ಅಂಬಿಗರಚೌಡಯ್ಯನವರ ಪೀಠವನ್ನು ಕಾಗಿನಲೆಯ ಮಾದರಿಯಲ್ಲಿ ಪ್ರಾಧಿಕಾರವನ್ನಾಗಿ ಮಾಡಬೇಕು. ಬಡ ಸಮಾಜದ ಉದ್ಧಾರದ ಸಲುವಾಗಿ ಇಲ್ಲಿನ ಪ್ರಮುಖ ಬೇಡಿಕೆಗಳನ್ನು ಸನ್ಮಾನ ಮುಖ್ಯಮಂತ್ರಿಗಳು ಈಡೇರಿಸುವಂತೆ ಮನವಿ ಮಾಡಿಕೊಂಡರು.
ಸಮಾಜದ ಮುಖಂಡರಾದ ನಾರಾಯಣಸ್ವಾಮಿ, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಬಾಬುರಾವ್ ಚಿಂಚನಸೂರ, ರವಿಕುಮಾರ, ಮಾಜಿ ಸಚಿವರಾದ ಪ್ರಮೋದ ಮಧ್ವರಾಜ್ ಅವರು ಮಾತನಾಡಿ ಅಂಬಿಗರ ಚೌಡಯ್ಯ ಪ್ರಾಧಿಕಾರವನ್ನು ರಚಿಸಿ ಕನಿಷ್ಠ 100 ಕೋಟಿ ರೂ.ಗಳನ್ನು ಘೋಷಿಸಬೇಕು. ಸಮಾಜದ ಬಹುದಿನಗಳ ಬೇಡಿಕೆಯಾದ ಪರಿಶಿಷ್ಟ ವರ್ಗಕ್ಕೆ ಕೋಲಿ ಸಮಾಜವನ್ನು ಸೇರಿಸಬೇಕು ಎಂದು ಮನವಿ ಮಾಡಿಕೊಂಡರು.