ಶ್ರೀ ಶಂಕರಾಚಾರ್ಯ ಜಯಂತಿ: ಪೂರ್ವಭಾವಿ ಸಭೆಅರ್ಥಪೂರ್ಣ ಜಯಂತಿ ಆಚರಣೆಗೆ ಕ್ರಮ ವಹಿಸಿ: ಎಡಿಸಿ ಸಿದ್ರಾಮೇಶ್ವರ
Sri Shankaracharya Jayanti: Preparatory meeting, take steps for meaningful Jayanti celebrations: ADC
ಕೊಪ್ಪಳ 08: ಜಿಲ್ಲಾಡಳಿತ ಹಾಗೂ ಶ್ರೀ ಶಂಕರ ಸೇವಾ ಸಮಿತಿ ಕೋಟೆ(ರಿ) ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 21 ರಂದು ಆಚರಿಸಲಾಗುವ ಶ್ರೀ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಕ್ರಮ ವಹಿಸಿ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅಧಿಕಾರಿಗಳಿಗೆ ಸೂಚಿಸಿದರು. ಅವರು ಬುಧವಾರದಂದು ಶ್ರೀ ಶಂಕರಾಚಾರ್ಯರ ಜಯಂತಿ ಅಂಗವಾಗಿ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಏ.21 ರಂದು ಸಂಜೆ 4 ಗಂಟೆಗೆ ಶ್ರೀ ಶಂಕರ ಸಾಂಸ್ಕೃತಿಕ ಭವನದಿಂದ ಶ್ರೀ ಶಂಕರಾಚಾರ್ಯರ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ಮೆರವಣಿಗೆಯು ನಗರದ ಗಡಿಯಾರ ಕಂಬ, ಟಾಂಗಾ ಕೂಟ, ವಾರಕರ ಓಣಿ ಮಾರ್ಗವಾಗಿ ಸಂಚರಿಸಿ ಶ್ರೀ ಶಂಕರ ಸಾಂಸ್ಕೃತಿಕ ಭವನವನ್ನು ತಲುಪುತ್ತದೆ.
ಸಂಜೆ 6 ಗಂಟೆಗೆ ನಗರದ ಕೋಟೆ ಪ್ರದೇಶದಲ್ಲಿರುವ ಶ್ರೀ ಶಂಕರ ಸಾಂಸ್ಕೃತಿಕ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಶುದ್ಧ ಕುಡಿಯುವ ನೀರು ಹಾಗೂ ಅಗತ್ಯ ಸಿದ್ದತೆಗಳನ್ನು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಸಮಾಜದ ಬಾಂಧವರ ಸಹಕಾರದೊಂದಿಗೆ ಅರ್ಥಪೂರ್ಣವಾಗಿ ಜಯಂತಿ ಆಚರಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು. ಸಮಾಜದ ಬಾಂಧವರು ಕೂಡ ಶಿಷ್ಠಾಚಾರದ ಉಲ್ಲಂಘನೆಯಾಗದಂತೆ ಅಧಿಕಾರಿಗಳೊಂದಿಗೆ ಸಹಕರಿಸಬೇಕು ಎಂದು ತಿಳಿಸಿದರು.ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕರ್ಣಕುಮಾರ, ಆಹಾರ ಇಲಾಖೆಯ ಉಪನಿರ್ದೇಶಕರಾದ ವಿಶ್ವನಾಥಗೌಡ ಎಂ.ಎನ್., ಡಿಸಿಎಫ್ ಕಚೇರಿಯ ಮಲ್ಲಿಕಾರ್ಜುನ ಗೌಡರ್, ಎಎಸ್‌ಐ ವೀರಭದ್ರ್ಪ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ., ಸಮಾಜದ ಮುಖಂಡರಾದ ಡಿ.ವಿ.ಜೋಶಿ, ರಮೇಶ ಪದಕಿ, ಅಶೋಕ ಪದಕಿ, ರವಿ ಪುರೋಹಿತ, ಬಾಳಂಭಟ್ ಜೋಶಿ, ವಿನಾಯಕ ಜೋಶಿ, ಸೇರಿದಂತೆ ಸಮಾಜದ ಇತರೆ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 