ಶ್ರೀ ಸಿದ್ದೇಶ್ವರ ಜಾತ್ರೆ
Sri Siddeshwara Fair
ಲೋಕದರ್ಶನ ವರದಿ
ಶ್ರೀ ಸಿದ್ದೇಶ್ವರ ಜಾತ್ರೆ
ಕಮತೇನಟ್ಟಿ, 21: ಚಿಕ್ಕೋಡಿ ತಾಲೂಕಿನ ಕಮತೇನಟ್ಟಿ ಗ್ರಾಮದ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವವು ಏಪ್ರಿಲ್.19 ರಿಂದ ಏಪ್ರಿಲ್.21ರ ವರೆಗೆ ವಿಜೃಂಭಣೆಯಿಂದ ನಡೆಯಿತು.
ಏ.19 ರಂದು ರಾತ್ರಿ 9 ಗಂಟೆಗೆ ಹರದೇಶಿ-ನಾಗೇಶಿ ಡೊಳ್ಳಿನ ಪದಗಳು ಜರುಗಿದವು. ಏ.20ರಂದು ಮುಂಜಾನೆ ಮಾರುತಿ ದೇವಾಸ್ಥಾನದಿಂದ ಪ್ರಾರಂಭವಾದ ಪಲ್ಲಕ್ಕಿ ಉತ್ಸವವು ಸಕಲ ಡೋಳು ವಾದ್ಯಗಳೊಂದಿಗೆ ಬಂಡಾರ ಎರಚುತ್ತಾ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಿದ್ದೇಶ್ವರ ದೇವಸ್ಥಾನದಲ್ಲಿ ಕೊನೆಗೊಂಡಿತು. ಜಾತ್ರೆಯಲ್ಲಿ ಗ್ರಾಮದ ಭಕ್ತರು ದೇವರಿಗೆ ಹೂವು-ಭಂಡಾರ ಹಾರಿಸಿ, ಟೆಂಗಿನಕಾಯಿ ಕರ್ೂರ ಅರ್ಿಸಿ ತಮ್ಮ ಹರಕೆ ತಿರಿಸಿದರು. ಮಧ್ಯಾಹ್ನ ಮಹಾಪ್ರಸಾದ ಸೇವಿಸಿ ದೇವರದರ್ಶನ ಪಡೆದು ಪುನೀತರಾದರು. ರಾತ್ರಿ 10.00 ಗಂಟೆಗೆ ರಸಮಂಜರಿ ಕಾರ್ಯಕ್ರಮ ನಡೆಯಿತು.
ಏ.21ರಂದು ಸಂಜೆ ಜಂಗಿ ಕುಸ್ತಿಗಳು ನಡೆದವು ಹಾಗೂ ರಾತ್ರಿ 10 ಗಂಟೆಗೆ ಶ್ರೀ ಸಿದ್ದೇಶ್ವರ ನವತರುಣ ನಾಟ್ಯ ಸಂಘ ಕಲಾವಿದರ ಬಳಗ ಕಮತೇನಟ್ಟಿ ಇವರಿಂದ ಭವ್ಯರಂಗ ಮಂಟಪದಲ್ಲಿ ದಿಲ್ಲಿ ಹೊಕ್ಕ ಪುಂಡ ಹುಲಿ ಎಂಬ ಸಾಮಾಜಿಕ ನಾಟಕ ನಡೆಯಿತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 