ಎಸ್.ಎಸ್.ಎಲ್.ಸಿಯಲ್ಲಿ ಶ್ರೀ ಸಿದ್ಧಾರೂಢ ಸರಕಾರಿ ಪ್ರೌಢಶಾಲೆ ಉತ್ತಮ ಸಾಧನೆ
Sri Siddharoodha Government High School achieves excellent results in SSLC
ಲೋಕದರ್ಶನ ವರದಿ
ಮಹಾಲಿಂಗಪುರ 28: 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಶೇಕಡ 94.7 ರಷ್ಟು ಪಡೆಯುವುದರೊಂದಿಗೆ ಸಮೀಪದ ರನ್ನ ಬೆಳಗಲಿ ಪಟ್ಟಣದ ಶ್ರೀ ಸಿದ್ಧಾರೂಢ ಸರಕಾರಿ ಪ್ರೌಢಶಾಲೆ ಉತ್ತಮ ಸಾಧನೆಗೈದಿದೆ.
ಕುಮಾರಿ ಕಾವೇರಿ ಡೊಳ್ಳಿ 94. 56ಅ ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ, ಕುಮಾರಿ ಲಕ್ಷ್ಮಿ ಒಂಟಗೋಡಿ 93. 92 ಅ ದ್ವಿತೀಯ ಸ್ಥಾನ, ಕುಮಾರಿ ಲಕ್ಷ್ಮಿ ಉಪ್ಪಾರಟ್ಟಿ 89.28ಅ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಪರೀಕ್ಷೆಗೆ ಕುಳಿತ 167 ವಿಧ್ಯಾರ್ಥಿಗಳಲ್ಲಿ 157 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 9 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 74 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 35 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ , 38 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿ,ಶಾಲೆಯ ಕೀರ್ತಿಯನ್ನು ಇಮ್ಮಡಿಗೊಳಿಸಿದ್ದಾರೆ.ಸಾಧಕ ವಿದ್ಯಾರ್ಥಿಗಳನ್ನು ಮತ್ತು ಪಾಲಕರನ್ನು ಶಾಲೆಯಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು .
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಗುರುಮಾತೆ ಎಸ್.ಎಸ್.ಉದಪುಡಿ, ಎಸ್ಡಿಎಂಸಿ ಅಧ್ಯಕ್ಷ ಗೀರೀಶ ಸಂಕ್ರಟ್ಟಿ, ವಿಠ್ಠಲ ಡೊಳ್ಳಿ ,ಲಕ್ಷ್ಮಣ ಒಂಟಗೋಡಿ, ನಾರಾಯಣ ಒಂಟಗೋಡಿ, ಶಿಕ್ಷಕ ಬಿ.ಪಿ.ಚೋಪಡೆ ಕಿರಣ ಪವಾರ, ರವಿ ಹಿರೇಕಲ್ಮಠ ಮತ್ತು ಶಾಲಾ ಶಾಲಾ ಸಿಬ್ಬಂದಿ ಹಾಗೂ ಉಸ್ತುವಾರಿ ಸಮಿತಿಯವರು ಉಪಸ್ಥಿತರಿದ್ದು ಮಕ್ಕಳಿಗೆ ಶುಭ ಕೋರಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 