ಶ್ರೀ ಶೃಂಗೇರಿ ಶಂಕರ ಮಠ, ಸಭಾಪತಿ ಬೀದಿ ಹಾಗೂ ಸಂಗನಕಲ್ಲು ರಸ್ತೆ, ಗುರುಕೃಪೆಯಿಂದ ಪ್ರೇರಣದಾಯಕ ಕಾರ್ಯಕ್ರಮ ಯಶಸ್ವಿ
Sri Sringeri Shankara Math, Sabhapati Street and Sanganakallu Road, inspirational program successful
ಲೋಕದರ್ಶನ ವರದಿ
ಬಳ್ಳಾರಿ 29: ನಗರದ ಸಂಗನಕಲ್ಲು ರಸ್ತೆಯಲ್ಲಿರುವ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಶನಿವಾರ ನಡೆದ ಶ್ರೀ ಗುರುರಾಜ್ ಕರಜಗಿ ಅವರ ಪ್ರೇರಣದಾಯಕ ಭಾಷಣ ಅತ್ಯಂತ ವಿಜೃಂಭಣೆಯಿಂದ ಮತ್ತು ಯಶಸ್ವಿಯಾಗಿ ನೆರವೇರಿತು. ಈ ಕಾರ್ಯಕ್ರಮದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಶಿಕ್ಷಕರು ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮದ ವೈಭವವನ್ನು ಹೆಚ್ಚಿಸಿದರು. ಪೂರ್ವಯೋಚಿತ ಯೋಜನೆಯಂತೆ ಎಲ್ಲಾ ಕಾರ್ಯಕ್ರಮಗಳು ಸಮರ್ಕವಾಗಿ ನಡೆದವು. ಉಭಯ ಜಗದ್ಗುರುಗಳ ಆಶೀರ್ವಾದದಿಂದ ಕಾರ್ಯಕ್ರಮ ಯಾವುದೇ ಅಡೆತಡೆಗಳಿಲ್ಲದೆ ಸುಸೂತ್ರವಾಗಿ ನೆರವೇರಿತು. ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲಾ ಶಿಕ್ಷಕರಿಗೆ ಸಮರ್ಕವಾದ ಭೋಜನ ವ್ಯವಸ್ಥೆ ಕಲ್ಪಿಸಲಾಗಿತ್ತು.
ಈ ಕಾರ್ಯಕ್ರಮಕ್ಕೆ ಸಹಕರಿಸಿದ ರಾಜ್ಯ ಸಂಚಾಲಕರಾದ ಶ್ರೀ ಶಂಕರ ತತ್ವ ಪ್ರಚಾರ ಅಭಿಯಾನದ ಶ್ರೀ ತೇಜ ಶಂಕರ ಸೋಮಯಾಜೀ ಹಾಗೂ ಶ್ರೀ ಶೃಂಗೇರಿ ಶಾರದಾ ಪೀಠದ ಉತ್ತರ ಕರ್ನಾಟಕ ಭಾಗದ ವಿಶೇಷ ಪ್ರತಿನಿಧಿಯಾದ *ಪೂಜ್ಯ ಶ್ರೀ ದತ್ತಪ್ಪಯ್ಯ ಸ್ವಾಮೀಜಿ ಅವರ ಉಪಸ್ಥಿತಿ ಕಾರ್ಯಕ್ರಮಕ್ಕೆ ವಿಶೇಷ ಶೋಭೆ ತಂದಿತು. ಈ ಮಹತ್ವದ ಕಾರ್ಯಕ್ರಮಕ್ಕೆ ಹಿಂದಿನಿಂದಲೇ ಸಕ್ರಿಯವಾಗಿ ಸಹಕಾರ ನೀಡಿದ ಅಹಂ ಬ್ರಹ್ಮಾಸ್ಮಿ ಪ್ರತಿಷ್ಠಾನಕ್ಕೆ ಹೃತ್ಪೂರ್ವಕ ಧನ್ಯವಾದಗಳು ಸಲ್ಲಿಸಲಾಗುತ್ತದೆ. ಎಲ್ಲಾ ಭಕ್ತರು ಸಕ್ರಿಯವಾಗಿ ಭಾಗವಹಿಸಿ ಉಭಯ ಜಗದ್ಗುರುಗಳ ಕೃಪೆಗೆ ಪಾತ್ರರಾಗಿದ್ದಾರೆ. ಬಳ್ಳಾರಿ ಭಕ್ತರು ಇಂತಹ ಕಾರ್ಯಕ್ರಮಗಳನ್ನು ಇನ್ನು ಹೆಚ್ಚಿನ ಮಟ್ಟದಲ್ಲಿ ಆಯೋಜಿಸಲು ಉತ್ಸುಕರಾಗಿದ್ದು, ಮುಂದಿನ ದಿನಗಳಲ್ಲಿ ಜಗದ್ಗುರುಗಳ ಆದೇಶದಂತೆ ಕಾರ್ಯನಿರ್ವಹಿಸಲು ಸಂಕಲ್ಪ ಮಾಡಿದ್ದಾರೆ
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 