ಶತಮಾನೋತ್ಸವದ ಸಂಭ್ರಮದಲ್ಲೂ ಅಳಿವು-ಉಳಿವಿನ ಹೋರಾಟದಲ್ಲಿ ಶ್ರೀ ಉಮಾ ವಿದ್ಯಾಲಯ
Sri Uma Vidyalaya: A struggle for survival amidst centenary celebrations
ಲಕ್ಷ್ಮೇಶ್ವರ, ಆ.28: ಶತಮಾನಕ್ಕೂ ಹೆಚ್ಚು ಕಾಲ ತನ್ನದೇ ಆದ ಶೈಕ್ಷಣಿಕ ಕೊಡುಗೆಯ ಮೂಲಕ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾದ ಶ್ರೀ ಉಮಾ ವಿದ್ಯಾಲಯ ಪುರಸಭೆ ಪ್ರೌಢಶಾಲೆ ಇದೀಗ ಶತಮಾನೋತ್ಸವದ ಅಂಚಿನಲ್ಲಿ ನಿಂತಿದೆ. ಆದರೆ, ಅನುದಾನದ ಕೊರತೆ, ಶಿಕ್ಷಕರ ನೇಮಕಾತಿಯಲ್ಲಿನ ಅಡಚಣೆ ಹಾಗೂ ಆಡಳಿತಾತ್ಮಕ ನಿರ್ಲಕ್ಷ್ಯದಿಂದಾಗಿ ಶಾಲೆ ಸಂಕಷ್ಟಕ್ಕೆ ಸಿಲುಕಿರುವುದು ಕಳವಳಕಾರಿ ಸಂಗತಿಯಾಗಿದೆ.
ಸೆಪ್ಟೆಂಬರ್ 1ರಂದು ಈ ಐತಿಹಾಸಿಕ ಶಾಲೆ ಅಕ್ಷರಶಃ ನೂರು ವರ್ಷಗಳನ್ನು ಪೂರೈಸಲಿದೆ. ಇದು ಲಕ್ಷ್ಮೇಶ್ವರ ಪಟ್ಟಣದ ಹೆಮ್ಮೆಯ ವಿಷಯವಾಗಿದ್ದರೂ, ಪ್ರಸ್ತುತ ಶಾಲೆಯಲ್ಲಿ ಕೇವಲ ನಾಲ್ವರು ಕಾಯಂ ಹಾಗೂ ಮೂವರು ಅರೆಕಾಲಿಕ ಶಿಕ್ಷಕರ ನೆರವಿನಿಂದ 224 ಮಕ್ಕಳ ಭವಿಷ್ಯ ರೂಪಿಸುವ ಜವಾಬ್ದಾರಿ ನಿರ್ವಹಿಸಲಾಗುತ್ತಿದೆ.
ಪಟ್ಟಣದ ಇತರ ಶಾಲೆಗಳು ಕಡಿಮೆ ಅವಧಿಯ ಸಂಭ್ರಮಾಚರಣೆಗಳನ್ನೂ ಅದ್ದೂರಿಯಾಗಿ ನಡೆಸುತ್ತಿರುವ ಸಂದರ್ಭದಲ್ಲಿ, ನೂರು ವರ್ಷಗಳ ಶೈಕ್ಷಣಿಕ ಪರಂಪರೆ ಹೊಂದಿರುವ ಈ ವಿದ್ಯಾಸಂಸ್ಥೆಗೆ ಅಗತ್ಯ ಸೌಲಭ್ಯಗಳು ಹಾಗೂ ಬೆಂಬಲದ ಕೊರತೆ ಕಂಡುಬರುತ್ತಿರುವುದು ಶಿಕ್ಷಣ ಪ್ರೇಮಿಗಳು ಮತ್ತು ಹಳೆಯ ವಿದ್ಯಾರ್ಥಿಗಳಲ್ಲಿ ನೋವು ಮೂಡಿಸಿದೆ.
ಶಾಲೆಯ ಪುನರುಜ್ಜೀವನಕ್ಕೆ ಹಳೆಯ ವಿದ್ಯಾರ್ಥಿಗಳ ನೆರವು ಅಗತ್ಯ
ದೇಶ-ವಿದೇಶಗಳಲ್ಲಿ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ನೆಲೆಸಿರುವ ಶಾಲೆಯ ಸಾವಿರಾರು ಹಳೆಯ ವಿದ್ಯಾರ್ಥಿಗಳು ತಕ್ಷಣವೇ ಒಂದಾಗಿ, ಶಾಲೆಯ ಪುನರುಜ್ಜೀವನಕ್ಕಾಗಿ ಆರ್ಥಿಕ ಹಾಗೂ ನೈತಿಕ ಬೆಂಬಲ ನೀಡಬೇಕಿದೆ. ಹಳೆಯ ವಿದ್ಯಾರ್ಥಿಗಳ ಸಂಘಟಿತ ಪ್ರಯತ್ನದಿಂದ ಶಾಲೆಗೆ ಅಗತ್ಯವಿರುವ ಮೂಲಸೌಕರ್ಯ ಹಾಗೂ ಶೈಕ್ಷಣಿಕ ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯವಾಗಲಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 