ಕೆರೆಯ ಅಭಿವೃದ್ಧಿ ಕಾಮಗಾರಿ ಪರೀಶೀಲಿಸಿದ ಶ್ರೀಧರ್ ಚಿನಗುಂಡಿ
Sridhar Chingundi inspected the development work of the lake
ನರಗುಂದ, ಸೆ. 07: ತಾಲ್ಲೂಕಿನ ಬೆನಕನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಕದಾಳ ಗ್ರಾಮದಲ್ಲಿ ವೃಕ್ಷಶ್ರೀರಾಮ್ಜಿ ಯೋಜನೆಯಡಿ ನಡೆಯುತ್ತಿರುವ ಕೆರೆ ಅಭಿವೃದ್ಧಿ ಕಾಮಗಾರಿಯನ್ನು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ ಸೋಮವಾರ ಭೇಟಿ ನೀಡಿ ಪರೀಶೀಲಿಸಿದರು.
ಕಾಮಗಾರಿ ಸ್ಥಳದಲ್ಲಿದ್ದ ಕೂಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದ ಅವರು, ಯೋಜನೆಯಡಿ ದೊರೆಯುವ ಸೌಲಭ್ಯಗಳು, ಕೂಲಿ ಪಾವತಿ ಹಾಗೂ ಹಾಜರಾತಿ ನಿಯಮಗಳ ಕುರಿತು ಮಾಹಿತಿ ನೀಡಿದರು. ಯೋಜನೆಯಡಿ ದಿನಕ್ಕೆ ರೂ.382 ಕೂಲಿ ನಿಗದಿಪಡಿಸಲಾಗಿದೆ. ಕಾರ್ಮಿಕರು ನಿಗದಿತ ಪ್ರಮಾಣದ ಕೆಲಸವನ್ನು ಅಳತೆಗೆ ಅನುಗುಣವಾಗಿ ಪೂರ್ಣಗೊಳಿಸಿದರೆ ಪೂರ್ಣ ಕೂಲಿ ಪಡೆಯಲಿದ್ದಾರೆ. ಕೆಲಸದ ಅಳತೆಯಲ್ಲಿ ವ್ಯತ್ಯಾಸ ಕಂಡುಬಂದರೆ ಅದಕ್ಕೆ ಅನುಗುಣವಾಗಿ ಕೂಲಿ ಮೊತ್ತದಲ್ಲೂ ವ್ಯತ್ಯಾಸವಾಗಲಿದೆ ಎಂದು ತಿಳಿಸಿದರು.
ಕಾರ್ಮಿಕರು ನಿರಂತರವಾಗಿ ಕೆಲಸ ಒದಗಿಸುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಯೋಜನೆಯಡಿ ನಿರಂತರವಾಗಿ ಕಾಮಗಾರಿಗಳನ್ನು ಕೈಗೊಳ್ಳಲು ಕ್ರಮ ವಹಿಸಲಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಕಾಮಗಾರಿಗಳಲ್ಲಿ ಪಾಲ್ಗೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಇಒ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕೆಲ ಕಾರ್ಮಿಕರು ನಮೂನೆ-6 ಸಲ್ಲಿಸಿ 15 ದಿನ ಕಳೆದರೂ ಕೆಲಸ ನೀಡಿಲ್ಲ ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಇಒ, ಮೊದಲು ನಮೂನೆ-6 ಸಲ್ಲಿಸುವಂತೆ ಸೂಚಿಸಿ, ಮುಂದಿನ 15 ದಿನಗಳಲ್ಲಿ ಕೆಲಸ ಒದಗಿಸಲಾಗುವುದು. ಒಂದು ವೇಳೆ ಸಿಬ್ಬಂದಿಯಿಂದ ಕೆಲಸ ನೀಡಲು ಸಾಧ್ಯವಾಗದಿದ್ದರೆ, ಯೋಜನೆಯಡಿ ನಿರುದ್ಯೋಗ ಭತ್ಯೆ ನೀಡುವ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಭರವಸೆ ನೀಡಿದರು.
ಎರಡು ಹಾಜರಾತಿ ಕಡ್ಡಾಯ
ಕಾಮಗಾರಿ ಸ್ಥಳದಲ್ಲಿ ಕಾರ್ಮಿಕರು ದಿನದ ಎರಡು ಹಾಜರಾತಿಗಳಿಗೂ ಕಡ್ಡಾಯವಾಗಿ ಹಾಜರಾಗಬೇಕು. ಒಂದು ಹಾಜರಾತಿಗೆ ಮಾತ್ರ ಹಾಜರಾಗಿ ಮತ್ತೊಂದಕ್ಕೆ ಗೈರುಹಾಜರಾದರೆ ಕೂಲಿ ಪಾವತಿಯಲ್ಲಿ ತೊಂದರೆಯಾಗಲಿದೆ. ಆದ್ದರಿಂದ ಎರಡೂ ಹಾಜರಾತಿಗಳನ್ನು ಕಡ್ಡಾಯವಾಗಿ ದಾಖಲಿಸುವಂತೆ ಶ್ರೀಧರ್ ಚಿನಗುಂಡಿ ಸೂಚಿಸಿದರು.
ವೃಕ್ಷಶ್ರೀರಾಮ್ಜಿ ಯೋಜನೆಯಡಿ ವರ್ಷಕ್ಕೆ 125 ದಿನಗಳ ಉದ್ಯೋಗಾವಕಾಶವಿದ್ದು, ಅರ್ಹ ಕೂಲಿ ಕಾರ್ಮಿಕರಿಗೆ ವರ್ಷದಲ್ಲಿ 125 ದಿನಗಳವರೆಗೆ ಕೆಲಸ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಬೆನಕನಕೊಪ್ಪ ಗ್ರಾಮ ಪಂಚಾಯಿತಿ ಪಿಡಿಒ ವಿ.ಆರ್. ರಾಯನಗೌಡ, ಯೋಜನೆಯ ಸಿಬ್ಬಂದಿ ಹನುಮಂತ ಡಂಬಳ, ಲಿಂಗರಾಜ ಮುಡಿಗೌಡ್ರ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 