72 ಲಕ್ಷ ವೆಚ್ಚದಲ್ಲಿ ಮನೆ, ಮನೆಗೆ ಗಂಗೆ ಯೋಜನೆ ಕಾಮಗಾರಿಗೆ ಶ್ರೀನಿವಾಸ ಮಾನೆ ಭೂಮಿಪೂಜೆ
Srinivasa Mane performs Bhoomi Pooja for the House to House Ganga Project at a cost of Rs. 72 lakhs
ಲೋಕದರ್ಶನ ವರದಿ
72 ಲಕ್ಷ ವೆಚ್ಚದಲ್ಲಿ ಮನೆ, ಮನೆಗೆ ಗಂಗೆ ಯೋಜನೆ ಕಾಮಗಾರಿಗೆ ಶ್ರೀನಿವಾಸ ಮಾನೆ ಭೂಮಿಪೂಜೆ
ಹಾನಗಲ್ 15 :ತಾಲೂಕಿನ ಆಡೂರು ಗ್ರಾಮದಲ್ಲಿ ? 72 ಲಕ್ಷ ವೆಚ್ಚದಲ್ಲಿ ಮನೆ, ಮನೆಗೆ ಗಂಗೆ ಯೋಜನೆ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.
ತಾಲೂಕಿನ ಬಹುತೇಕ ಗ್ರಾಪಂ ವ್ಯಾಪ್ತಿಗಳಲ್ಲಿ ಮಹತ್ವಾಕಾಂಕ್ಷೆಯ ಮನೆ, ಮನೆಗೆ ಗಂಗೆ ಯೋಜನೆ ಕಾಮಗಾರಿ ಮುಕ್ತಾಯ ಹಂತದಲ್ಲಿದೆ. ಕೂಡಲ ಬಹುಗ್ರಾಮ ನದಿ ನೀರು ಸರಬರಾಜು ಯೋಜನೆ ಶೀಘ್ರ ಚಾಲನೆ ಪಡೆಯಲಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸಮರ್ಕ ಕುಡಿಯುವ ನೀರು ಪೂರೈಕೆಗೆ ಗಮನ ಹರಿಸಲಾಗಿದೆ. ನೀರಾವರಿ ಯೋಜನೆಗಳ ಮೂಲಕ ಕೆರೆ, ಕಟ್ಟೆಗಳಿಗೆ ಸಮರ್ಕವಾಗಿ ನೀರು ಪೂರೈಸಿ ಅಂತರ್ಜಲ ಮಟ್ಟದ ಸುಧಾರಣೆಗೆ ಚಿತ್ತ ನೆಡಲಾಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದ ಶಾಸಕ ಶ್ರೀನಿವಾಸ ಮಾನೆ, ನಿಗದಿತ ಕಾಲಾವಧಿಯಲ್ಲಿ ಕಾಮಗಾರಿ ಮುಗಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು.ಗ್ರಾಪಂ ಅಧ್ಯಕ್ಷ ಮಾತಾಂರ್ಡಪ್ಪ ಬಾರ್ಕಿ, ತಾಪಂ ಮಾಜಿ ಅಧ್ಯಕ್ಷ ಶಿವಬಸಪ್ಪ ಪೂಜಾರ, ಗ್ರಾಪಂ ಮಾಜಿ ಅಧ್ಯಕ್ಷ ನಾಗಪ್ಪ ಪೋಲೇಶಿ, ಪ್ರಮುಖರಾದ ಭರಮಣ್ಣ ಶಿವೂರ, ಬಾಬು ನಿಕ್ಕಂ, ಬಾಬುಲಾಲ್ ನಾಯ್ಕರ, ಶರಣ ಬಳಿಗಾರ ಮೈಲಾರಿ ಬಾರ್ಕಿ, ಸಂತೋಷ ಹೋತನಹಳ್ಳಿ, ಅನ್ವರಸಾಬ ಸುರಳೇಶ್ವರ, ಶೇಕಪ್ಪ ಸಂಗೂರ, ಶಬ್ಬೀರ್, ಪ್ರಕಾಶ ಹುಲಗೂರ, ಸಲೀಂ ಪೀರಜಾದೆ, ಬಸವರಾಜ ಡುಮ್ಮನವರ ಸೇರಿದಂತೆ ಗ್ರಾಪಂ ಸದಸ್ಯರು, ಗ್ರಾಮಸ್ಥರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 