ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಶ್ರೀನಿವಾಸ ಮಾನೆ ಭೂಮಿಪೂಜೆ
Srinivasa Mane performs Bhoomi Pooja for various development works
ಲೋಕದರ್ಶನ ವರದಿ
ಹಾನಗಲ್ 01: ಅಗತ್ಯ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಬಸವಳಿದಿದ್ದ ಜನಸಾಮಾನ್ಯರ ನೆರವಿಗೆ ಧಾವಿಸಲು ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಕೂಡಲೇ ಸಾರ್ವತ್ರಿಕ ಮೂಲ ಆದಾಯ ಪರಿಕಲ್ಪನೆಗಳಾದ ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ಆರ್ಥಿಕ ಸುಭದ್ರತೆ ಮತ್ತು ಸಾಮಾಜಿಕ ಸುಸ್ಥಿರತೆ ಒದಗಿಸುವುದಕ್ಕೆ ಆದ್ಯತೆ ನೀಡಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ತಾಲೂಕಿನ ಕೂಡಲ ಗ್ರಾಮದಲ್ಲಿ 2025-26 ನೇ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮದಡಿ 20 ಲಕ್ಷ ರೂ. ವೆಚ್ಚದಲ್ಲಿ ಸಿಸಿರಸ್ತೆ ನಿರ್ಮಾಣ ಸೇರಿದಂತೆ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ಅವರು, ಪ್ರಸಕ್ತ ಸಾಲಿನಲ್ಲಿ ತಾಲೂಕಿಗೆ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮದಡಿ 50 ಕೋಟಿ ರೂ. ಅನುದಾನ ಲಭಿಸಿದ್ದು, ಮತ್ತೀಗ 25 ಕೋಟಿ ರೂ. ಲಭಿಸಲಿದೆ. ಅನುದಾನ ಬಿಡುಗಡೆಯಾಗುತ್ತಿದ್ದಂತೆಯೇ ಆಯಾ ಗ್ರಾಮಗಳ ಮುಖಂಡರು, ಸಾರ್ವಜನಿಕರ ಅಭಿಪ್ರಾಯ ಆಧರಿಸಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಸಾರ್ವಜನಿಕರ ಹಿತದೃಷ್ಟಿಯಿಂದ ತುರ್ತು ಅಗತ್ಯವಿರುವ ಕಾಮಗಾರಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮರಗಡಿ, ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಮುಖಂಡರಾದ ಫಕ್ಕಿರೇಶ ಮಾವಿನಮರದ, ಸುರೇಶ ಸೊಪ್ಪಿನ, ಪ್ರಭು ಬಮ್ಮಣ್ಣನವರ, ಮಲ್ಲಿಕಾರ್ಜುನ ಕರ್ಜಗಿ, ಬಾಲರಾಜ್ ವಾಲ್ಮೀಕಿ, ವೀರೇಶ ಬಡಿಗೇರ, ಶಂಕ್ರ್ಪ ಹರವಿ, ಅಶೋಕ ಗುಡ್ಡಪ್ಪನವರ, ಕಲವೀರ್ಪ ಕಲ್ಮನಿ, ಆದರ್ಶ ಶೆಟ್ಟಿ, ರವಿ ದೇಶಪಾಂಡೆ, ಪುಟ್ಟಪ್ಪ ನರೇಗಲ್, ಅಶೋಕ ಹಲಸೂರ, ಬಸನಗೌಡ ಪಾಟೀಲ ಸೇರಿದಂತೆ ಅನೇಕರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 