ಬಳ್ಳಾರಿ,ಅ 13: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಶ್ರೀರಾಮುಲು ಉಪಮುಖ್ಯಮಂತ್ರಿ ಮಾಡುವುದಾಗಿ ಘೋಷಣೆ ಮಾಡಿದದ್ದರು.ಆದರೆ ಸಚಿವ ಸಂಪುಟ ರಚನೆ ವೇಳೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿದೆ ಸಚಿವ ಸ್ಥಾನ ನೀಡಿರುವುದು ತಮಗೆ ತುಂಬಾ ಬೇಸರ ತರಿಸಿದೆ ಎಂದು ಶಾಸಕ ಸೋಮಶೇಖರ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿಂದು ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡು ಬಳಿಕ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ಶ್ರೀರಾಮುಲು ಉಪ ಮುಖ್ಯಮಂತ್ರಿ ಆಗಬೇಕು ಜೊತೆಗೆ ಅವರಿಗೆರ ಬಳ್ಳಾರಿ ಜಿಲ್ಲೆಯ ಉಸ್ತುವಾರಿಯನ್ನು ನೀಡಿ ಎಂದು ಹೇಳುವ ಮೂಲಕ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಗೆ ನೀಡಿರುವ ಬಳ್ಳಾರಿ ಉಸ್ತುವಾರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.
ರಾಮುಲುಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವ ಸಂಬಂಧ ಜಿಲ್ಲೆಯ ಎಲ್ಲಾ ಶಾಸಕರ ನಿಯೋಗ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮನವಿ ಮಾಡು ತ್ತೇವೆ.ಬಳ್ಳಾರಿ ಜಿಲ್ಲೆಯ ಅಭಿವೃದ್ಧಿಯಾಗಬೇಕೆಂದರೆ ಶ್ರೀರಾಮುಲುಗೆ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡಬೇಕು ಎಂದು ಸೋಮಶೇಖರ್ ರೆಡ್ಡಿ ಆಗ್ರಹಿಸಿದ್ದಾರೆ.
ಶ್ರೀರಾಮುಲು ಶ್ರಮದಿಂದ ವಾಲ್ಮೀಕಿ ಸಮುದಾಯಕ್ಕೆ ಶೇ 7.5 ಮೀಸಲಾತಿ ಘೋಷಣೆ ಆಗುತ್ತದೆ.ನ್ಯಾ.ನಾಗಮೋಹನದಾಸ ವರದಿ ಜಾರಿಯಾಗುವ ವಿಶ್ವಾಸ ವಿದೆ. ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಬರುತ್ತಾರೆ.ಶೀಘ್ರದಲ್ಲೇ ಬಳ್ಳಾರಿಯಲ್ಲಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಅವರು ತಿಳಿಸಿದರು.