ಪ್ರತ್ಯೇಕ ರಾಜ್ಯ ಹೋರಾಟದ ನೇತೃತ್ವ ವಹಿಸಲು ಶ್ರೀರಾಮುಲು ಸಿದ್ಧ
ಬಳ್ಳಾರಿ: ಪ್ರತ್ಯೇಕ ರಾಜ್ಯದ ಕೂಗಿಗೆ ಕಿಚ್ಚು ಹಚ್ಚಿದ ಬಿಜೆಪಿ ಶಾಸಕ ಬಿ. ಶ್ರೀರಾಮುಲು ಅವರು, ಉತ್ತರ ಕನರ್ಾಟಕ ಪ್ರತ್ಯೇಕ ರಾಜ್ಯ ಹೋರಾಟದ ನೇತೃತ್ವ ವಹಿಸಿಕೊಳ್ಳಲು ಸಿದ್ಧ ಎಂದು ಶುಕ್ರವಾರ ಹೇಳಿದ್ದಾರೆ.
ಇಂದು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು, ಉತ್ತರ ಕನರ್ಾಟಕಕ್ಕೆ ಅನ್ಯಾಯವಾದರೆ ಸಹಿಸುವುದಿಲ್ಲ, ಪ್ರತ್ಯೇಕ ರಾಜ್ಯಕ್ಕಾಗಿ ತೆಲಂಗಾಣ ಮಾದರಿಯಲ್ಲಿ ಹೋರಾಟ ನಡೆಸಬೇಕಾಗುತ್ತದೆ. ಹೋರಾಟದ ನೇತೃತ್ವವನ್ನು ನಾನೇ ವಹಿಸುತ್ತೇನೆ ಗುಡುಗಿದ್ದಾರೆ.
ಇದೇ ವೇಳೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶ್ರೀರಾಮುಲು, ಉತ್ತರ ಕನರ್ಾಟಕ ಮತ್ತು ಹೈದರಾಬಾದ್ ಕನರ್ಾಟಕ ಅಭಿವೃದ್ಧಿ ವಿಚಾರದಲ್ಲಿ ಸಿಎಂ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.
ರೈತರ ಎಲ್ಲಾ ಸಾಲ ಮನ್ನಾ ಮಾಡಲು ಕುಮಾರಸ್ವಾಮಿಗೆ ಆಗಿಲ್ಲ ಮತ್ತು ಮನ್ನಾ ಮಾಡಿದ ಸಾಲದ ಕುರಿತು ಅಧಿಸೂಚನೆಯನ್ನು ಹೊರಡಿಸಿಲ್ಲ. ಬಜೆಟ್ ಬಳಿಕ ಉತ್ತರ ಕನರ್ಾಟಕದ ಎಲ್ಲಾ ಶಾಸಕರೊಂದಿಗೆ ಮಾತಾಡಿದ್ದೇನೆ. ಮಾತುಕತೆ ಮುಂದುವರಿದಿದೆ. ಅನ್ಯಾಯ ಮುಂದುವರಿದರೆ ತೆಲಂಗಾಣ ಮಾದರಿ ಹೋರಾಟ ಮಾಡಲು ಸಿದ್ದ ಎಂದು ಎಚ್ಚರಿಸಿದರು. ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್ ನಲ್ಲಿ ಉತ್ತರ ಕನರ್ಾಟಕ್ಕೆ ಭಾರೀ ಅನ್ಯಾಯ ಮಾಡಿದ್ದಾರೆ . ಈಗ ಕಣ್ಣೀರಿಟ್ಟು ನಾಟಕ ಮಾಡುತ್ತಿದ್ದಾರೆ. ನಿಜವಾಗಿಯೂ ಕಣ್ಣೀರಿಡಬೇಕಾಗಿದ್ದು ಉತ್ತಕನರ್ಾಟಕದ ಜನತೆ ಎಂದಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 