ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: ಮಾಹಿತಿ ಪಡೆದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
Stampede at Mahakumbha Mela
ಪ್ರಯಾಗ್ರಾಜ್ 29: ಮಹಾಕುಂಭ ಮೇಳದಲ್ಲಿ ಭಕ್ತರು ಸಂಖ್ಯೆ ಹೆಚ್ಚಾದ ಕಾರಣ ಕಾಲ್ತುಳಿತವಾಗಿದ್ದು, ಘಟನೆಯಲ್ಲಿ ಹಲವು ಭಕ್ತರು ಗಾಯಗೊಂಡು 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ
ಮೌನಿ ಅಮಾವಾಸ್ಯೆ ಹಿನ್ನೆಲೆ ಕೋಟ್ಯಾಂತರ ಭಕ್ತರು ಸೇರಿದ್ದು, ಅಮೃತ ಸ್ನಾನ ಮಾಡಲು ಸರದಿ ಸಾಲಿನಲ್ಲಿ ತೆರಳಿದ್ದಾರೆ, ಆ ವೇಳೆ ಈ ಘಟನೆ ಸಂಭವಿಸಿದೆ.
ಈ ನಡುವೆ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಮಾಹಿತಿ ಪಡೆದುಕೊಂಡು ಪ್ರತಿಕ್ರಿಯೆ ನೀಡಿರುವ ಅವರು, ಸ್ಥಳದಲ್ಲಿ ಇದೀಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಇಂದು ಪ್ರಯಾಗ್‌ರಾಜ್‌ನಲ್ಲಿ ಸುಮಾರು 8 ರಿಂದ 10 ಕೋಟಿ ಭಕ್ತರು ಸೇರಿದ್ದು, ಸಂಗಮದೆಡೆಗೆ ಭಕ್ತರ ಸಂಚಾರ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. ಅಖಾರ ಮಾರ್ಗದಲ್ಲಿ ಬ್ಯಾರಿಕೇಡಿಂಗ್ ದಾಟಲು ಕೆಲವರು ಯತ್ನಿಸಿದ್ದು, ಈ ವೇಳೆ ಕೆಲ ಭಕ್ತರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದರು.
ಕಳೆದ ರಾತ್ರಿಯಿಂದ ಮೌನಿ ಅಮವಾಸ್ಯೆ ಮಹೂರ್ತ ಆರಂಭವಾದಾಗಿದ್ದು, ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರು ಪರಿಸ್ಥಿತಿಯ ವರದಿಗಳನ್ನು ನಿರಂತರವಾಗಿ ಅವಲೋಕನ ನಡೆಸುತ್ತಿದ್ದಾರೆ.
ನಾಗ್ ವಾಸುಕಿ ಮಾರ್ಗ ಮತ್ತು ಸಂಗಮ್ ಮಾರ್ಗದಲ್ಲಿ ಹೆಚ್ಚಿನ ಜನಸಂದಣಿ ಇದೆ. ಜನರು ಯಾವುದೇ ವದಂತಿಗಳಿಗೆ ಗಮನ ಕೊಡಬಾರದು. ಕುಂಭಮೇಳ ನಡೆಯುತ್ತಿರುವ ಪ್ರದೇಶದಲ್ಲಿ ಘಾಟ್‌ಗಳನ್ನು ನಿರ್ಮಿಸಲಾಗಿದೆ. ಭಕ್ತರು ಸಂಗಮದ ಬಳಿಗೇ ಸಮೀಪದ ಘಾಟ್‌ಗಳಲ್ಲಿ ಪವಿತ್ರ ಸ್ನಾನ ಮಾಡಬಹುದು. ಅಲ್ಲಿಯೂ ಸಂಗಮದ ನೀರು ಬರುತ್ತಿದೆ. ಭಕ್ತರ ಅನುಕೂಲಕ್ಕಾಗಿ ಭಾರತೀಯ ರೈಲ್ವೇ ವಿಶೇಷ ರೈಲುಗಳನ್ನು ವ್ಯವಸ್ಥೆ ಮಾಡಿದೆ. ಭಕ್ತರನ್ನು ಅವರವರ ಸ್ಥಳಗಳಿಗೆ ಹಿಂತಿರುಗಿಸಲು ಪ್ರಯಾಗರಾಜ್ ಪ್ರದೇಶದ ವಿವಿಧ ನಿಲ್ದಾಣಗಳಿಂದ ವಿಶೇಷ ರೈಲುಗಳ ವ್ಯವಸ್ಥೆಗಳಿವೆ ಎಂದು ಹೇಳಿದ್ದಾರೆ.
ಏತನ್ಮಧ್ಯೆ, ಉತ್ತರ ಪ್ರದೇಶ ಸರ್ಕಾರದ ಪ್ರಕಾರ ಬುಧವಾರ ಬೆಳಿಗ್ಗೆ 10 ಗಂಟೆಯವರೆಗೆ 3.61 ಕೋಟಿ ಭಕ್ತರು ಸಂಗಮದಲ್ಲಿ ಸ್ನಾನ ಮಾಡಿದ್ದಾರೆಂದು ತಿಳಿದುಬಂದಿದೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 