ಬೇಗನೆ ನರೇಗಾ ಕಾಮಗಾರಿ ಆರಂಭಿಸಿ, ಗುಳೆ ಹೋಗುವುದನ್ನು ತಡೆಯಿರಿ: ಶಾಸಕ ಡಾ. ಚಂದ್ರು ಲಮಾಣಿ
Start MGNREGA works immediately and prevent migration: MLA Dr. Chandru Lamani
ಶಿರಹಟ್ಟಿ, ಜು.20: ತಾಲೂಕಿನಲ್ಲಿ ಮಳೆಯ ಕೊರತೆಯಿಂದ ಕೂಲಿ ಕಾರ್ಮಿಕರಿಗೆ ಉದ್ಯೋಗದ ಅಭಾವ ಉಂಟಾಗಿದ್ದು, ಅವರು ಗುಳೆ ಹೋಗುತ್ತಿರುವ ಹಿನ್ನೆಲೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಕ್ಷಣವೇ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಸೂಚಿಸಿದರು. ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ‘ವಿಪತ್ತು ನಿರ್ವಹಣೆ ವಿಷಯಗಳ ಕುರಿತ ಟಾಸ್ಕ್ ಫೋರ್ಸ್ ಸಮಿತಿ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾರ್ವಜನಿಕರು ತಮ್ಮ ಸಮಸ್ಯೆಗಳೊಂದಿಗೆ ಕಚೇರಿಗಳಿಗೆ ಬಂದಾಗ ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಲಭ್ಯವಿರುವಂತೆ ನೋಡಿಕೊಳ್ಳಬೇಕು. ಜನಸ್ನೇಹಿ ಆಡಳಿತ ನೀಡುವ ನಿಟ್ಟಿನಲ್ಲಿ ಅಧಿಕಾರಿಗಳು ತಮ್ಮ ಕಾರ್ಯಸ್ಥಳದಲ್ಲೇ ನಿಯಮಿತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ತಿಳಿಸಿದರು. ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ದೂರುಗಳು ಹೆಚ್ಚಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ತುರ್ತಾಗಿ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಸೂಚಿಸಿದರು.
ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸಿ, ಪ್ರತಿಯೊಬ್ಬ ರೈತನ ಖಾತೆಗೆ 50 ಸಾವಿರ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದರು. ಸಭೆಯಲ್ಲಿ ತಹಶೀಲ್ದಾರ್ ರಾಘವೇಂದ್ರ ರಾವ್, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 