ಸಾಲ ಮನ್ನಾ ಮಾಹಿತಿ ಪಡೆಯಲು ಜೆಡಿಎಸ್ ಸಹಾಯವಾಣಿ ಆರಂಭ
ಬೆಂಗಳೂರು, ನ. 4: ರೈತರ ಸಾಲ ಮನ್ನಾ ಮಾಹಿತಿ ಪಡೆಯಲು ಜೆಡಿಎಸ್ ಸಹಾಯವಾಣಿ ಆರಂಭಿಸಿರುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಪ್ರತಿ ದಿನ ನೂರಾರು ರೈತರು ತಮ್ಮ ಬೆಳೆ ಸಾಲ ಮನ್ನಾ ವಿಚಾರವಾಗಿ ಮಾಹಿತಿ ಪಡೆಯಲು ತಮ್ಮ ಮನೆಗೆ ಬರುತ್ತಿದ್ದು, ದೂರದೂರಿನಿಂದ ಬರುವ ರೈತರಿಗೆ ಕಷ್ಟವಾಗಬಾರದೆಂದು ರೈತರ 'ಬೆಳೆ ಸಾಲ ಮನ್ನಾ ಸಹಾಯವಾಣಿ' ಆರಂಭಿಸಿರುವುದಾಗಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ರೈತರು ತಮ್ಮ ಮನೆಯಿಂದಲೇ 9164305868 ನಂಬರ್ ಗೆ ಬೆಳಗ್ಗೆ 10 ರಿಂದ 5 ರವರೆಗೆ ಕರೆ ಮಾಡಿ ಸಾಲಮನ್ನಾದ ವಿವರ ಪಡೆಯಬಹುದಾಗಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಕನಸಿನ ರೈತರ ಸಾಲಮನ್ನಾ ಯೋಜನೆಯನ್ನು ಜಾರಿಗೊಳಿಸಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 