ಕಾಶ್ಮೀರ ಕಣಿವೆಯಲ್ಲಿ ಮೊಬೈಲ್ ಸೇವೆ ಆರಂಭ, ಇಂಟರ್ ನೆಟ್ ಗೆ ಇನ್ನೂ ಕಾಯಬೇಕು...
ಶ್ರೀನಗರ, ಅ 14: ಜಮ್ಮು - ಕಾಶ್ಮೀರದಲ್ಲಿ ಇಂದಿನಿಂದ ಪೋಸ್ಟ್ ಪೇಯ್ಡ್ ಮೊಬೈಲ್ ಸೇವೆ ಆರಂಭವಾಗಿದೆ ಎಂದು ರಾಜ್ಯ ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ಪ್ರೀಪೇಯ್ಡ್ ಮೊಬೈಲ್ ಸೇವೆಗಳು ಆರಂಭವಾಗಿದ್ದು ಕಣಿವೆಯ ಹತ್ತು ಜಿಲ್ಲೆಗಳಲ್ಲಿ ಇಂದಿನಿಂದ ಪ್ರೀಪೇಯ್ಡ್ ಮತ್ತು ಪೋಸ್ಟ್ ಪೇಯ್ಡ್ ಮೊಬೈಲ್ ಸೇವೆಗಳು ಸಿಗಲಿದೆ. ಇಂದಿನಿಂದ ಮೊಬೈಲ್ ಸೇವೆ ಆರಂಭವಾದರೂ ಕಣಿವೆ ರಾಜ್ಯದಲ್ಲಿ ಇಂಟರ್ ನೆಟ್ ಸೇವೆ ಜನರು ಇನ್ನೂ ಸ್ವಲ್ಪ ದಿನ ಕಾಯಬೇಕು ಎಂದು ಅವರು ಹೇಳಿದ್ದಾರೆ. ಕಣಿವೆ ರಾಜ್ಯದಲ್ಲಿ ಪರಿಸ್ಥಿತಿ ದಿನದಿಂದ ದಿನಕ್ಕೆ ಸುಧಾರಿಸುತ್ತಿದ್ದು, ಮೊಬೈಲ್ ಸೇವೆಗಳ ಮೇಲಿನ ನಿರ್ಬಂಧವನ್ನು ಇಂದಿನಿಂದ ಸಂಪೂರ್ಣವಾಗಿ ತೆಗೆದುಹಾಕಲಾಗಿದೆ. ಕಾಶ್ಮೀರ ಕಣಿವೆಯ ಎಲ್ಲಾ 10 ಜಿಲ್ಲೆಗಳಲ್ಲಿ ಪ್ರೀಪೇಯ್ಡ್ ಮತ್ತು ಪೋಸ್ಟ್ ಪೇಯ್ಡ್ ಸೇವೆಗಳು ದೊರೆಯಲಿವೆ. ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕಳೆದ ಆಗಸ್ಟ್ 5 ರಂದು ಕೇಂದ್ರ ಸರ್ಕಾರ ವಾಪಸ್ಸು ಪಡೆದ ನಂತರ ಕಣಿವೆ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು, ಜನರು ವದಂತಿಗಳನ್ನು ಹಬ್ಬುವುದನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ ಇಂಟರ್ ನೆಟ್ ಮತ್ತು ಮೊಬೈಲ್ ಸೇವೆಗಳ ಮೇಲೆ ನಿರ್ಬಂಧ ಹಾಕಲಾಗಿತ್ತು. ಈಗ ಮೊಬೈಲ್ ಸೇವೆ ಆರಂಭವಾಗಿರುವುದು ಹೊಸ ಬೆಳವಣಿಗೆಯಾಗಿದೆ. ಅಂತರ್ಜಾಲ ಸಂಪರ್ಕ ಪಡೆಯಲ ಇನ್ನೂ ಸ್ವಲ್ಪ ಸಮಯ ಕಾಯಬೇಕಾಗಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 