ಕೊಪ್ಪಳ 08: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಎಲ್ಲ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಸತಿ ನಿಲಯಗಳಲ್ಲಿ ವಾರಾಂತ್ಯದಲ್ಲಿ ವಿಶೇಷ ತರಗತಿಗಳನ್ನು ಆರಂಭಿಸಿ, ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆಯು ಉತ್ತಮ ಫಲಿತಾಂಶ ಸಾಧಿಸಲು ವಸತಿ ನಿಲಯದ ಮೇಲ್ವಿಚಾರಕರು ವಿಶೇಷ ಆಸಕ್ತಿ ವಹಿಸಿ ಕಾರ್ಯನಿರ್ವಹಿಸಿ ಎಂದು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಆರ್.ಎಸ್. ಪೆದ್ದಪ್ಪಯ್ಯ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರದಂದು (ಫೆ.07) ನಡೆದ ಸಮಾಜ ಕಲ್ಯಾಣ ಇಲಾಖೆಯ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಉತ್ತಮ ಭವಿಷ್ಯ ರೂಪಿಸುವ ಉದ್ದೇಶದಿಂದ ಇಲಾಖೆಯು ಉಚಿತ ವಸತಿ ನಿಲಯಗಳನ್ನು, ವಸತಿ ಶಾಲೆಗಳನ್ನು ನಿರ್ಮಿಸಿದೆ. ಅಲ್ಲಿನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಾಗ ಇಲಾಖೆಯ ಹಾಗೂ ಪೋಷಕರ ಶ್ರಮ ಸಾರ್ಥಕವಾಗುತ್ತದೆ. ಈ ನಿಟ್ಟಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಮೆಟ್ರಿಕ್ ಹಾಗೂ ಪಿಯುಸಿ ದ್ವಿತೀಯ ವರ್ಷದಲ್ಲಿ ಓದುತ್ತಿರುವ ಮಕ್ಕಳ ಕುರಿತು ವಿಶೇಷ ಕಾಳಜಿ ವಹಿಸಿ ಜಿಲ್ಲೆಯು ಉತ್ತಮ ಫಲಿತಾಂಶ ಸಾಧಿಸಲು ಶ್ರಮಿಸಿ. ವಸತಿ ನಿಲಯಗಳಲ್ಲಿ ವಸತಿ ನಿಲಯದ ಮೇಲ್ವಿಚಾರಕರು ಪ್ರತಿ ವಾರಾಂತ್ಯದಲ್ಲಿ ವಿದ್ಯಾಥರ್ಿಗಳ ಸಂಖ್ಯೆಗನುಗುಣವಾಗಿ ಗುಂಪುಗಳನ್ನಾಗಿ ಮಾಡಿ ಅವರಿಗೆ ಕಠಿಣವೆನಿಸುವ ಗಣಿತ, ವಿಜ್ಞಾನ ಹಾಗೂ ಇಂಗ್ಲೀಷ್ ವಿಷಯಗಳ ಕುರಿತು ವಿಶೇಷ ತರಗತಿಗಳನ್ನು ಆಯೋಜಿಸಬೇಕು. ವಿಷಯ ಶಿಕ್ಷರನ್ನು ಈ ತರಗತಿಗಳಿಗೆ ನಿಯೋಜಿಸಬೇಕು. ವಸತಿ ನಿಲಯಗಳಲ್ಲಿ ತರಗತಿಗಳಿಗೆ ಸ್ಥಳಾವಕಾಶವಿಲ್ಲದಿದ್ದಲ್ಲಿ ಖಾಸಗಿ ಕಟ್ಟಡಗಳನ್ನು ಬಾಡಿಗೆಗೆ ಪಡೆದು ತರಗತಿಗಳನ್ನು ನಡೆಸಬೇಕು. ತರಗತಿಯಲ್ಲಿ ಬೋಧನೆ ಮಾಡುವ ಶಿಕ್ಪ್ಷಕರಿಗೆ ಗೌರವಧನವನ್ನು ನೀಡಲಾಗುವುದು. ಹಾಗೂ ಪ್ರತಿ ವಸತಿ ನಿಲಯದ ಮೇಲ್ವಿಚಾರಕರು ಮಕ್ಕಳಿಗೆ ಓದುವುದರ ಕುರಿತು ಪ್ರೋತ್ಸಾಹ ನೀಡುವುದರ ಜೊತೆಗೆ ಪ್ರತಿ ದಿನ ವಸತಿ ನಿಲಯದ ಮಕ್ಕಳಿಗೆ ಪರೀಕ್ಷಾ ತಯಾರಿ ಕುರಿತು ಮಾರ್ಗದರ್ಶನ ನೀಡಬೇಕು. ಈ ಬಾರಿ ಜಿಲ್ಲೆಯು ಉತ್ತಮ ಫಲಿತಾಂಶ ಸಾಧಿಸುವಂತೆ ಮಕ್ಕಳನ್ನು ತರಬೇತುಗೊಳಿಸಬೇಕು ಎಂದು ಅವರು ಹೇಳಿದರು.
ಕೆಲ ದಿನಗಳ ಹಿಂದೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿದ್ಯಾಥರ್ಿ ವಸತಿ ನಿಲಯದಲ್ಲಿ ವಿದ್ಯುತ್ ಆಘಾತದಿಂದ ಮಕ್ಕಳು ಸಾವನ್ನಪ್ಪಿದ ವಿಷಯವನ್ನು ಪ್ರಸ್ತಾಪಿಸಿದ ಅವರು, ಇಲಾಖೆಯಡಿ ಬರುವ ಯಾವುದೇ ವಸತಿ ನಿಲಯಗಳಲ್ಲಿ ಇಂತಹ ಅವಘಡಗಳು ಸಂಭವಿಸಬಾರದು. ಅಗತ್ಯವಿರುವ ಎಲ್ಲ ರೀತಿಯ ರಕ್ಷಣಾ ಕ್ರಮಗಳನ್ನು ಪ್ರತಿ ವಸತಿ ನಿಲಯವೂ ಹೊಂದಿರಬೇಕು. ದುರಸ್ತಿಯಲ್ಲಿರುವ ಅಥವಾ ಹಳೆಯದಾದ ಕಟ್ಟಡಗಳಲ್ಲಿ ಮಕ್ಕಳು ವಾಸಿಸುತ್ತಿದ್ದರೆ ಅಂತಹ ಕಟ್ಟಡಗಳ ಗುಣಮಟ್ಟವನ್ನು ಲೋಕೋಪಯೋಗಿ ಇಲಾಖೆಯಿಂದ ದೃಢಪಡಿಸಿಕೊಂಡು ಅಗತ್ಯವಿದ್ದಲ್ಲಿ ಕಟ್ಟಡಗಳ ಬದಲಾವಣೆ ಅಥವಾ ಹೊಸ ಕಟ್ಟಡಗಳಿಗೆ ಪ್ರಸ್ತಾವನೆಗಳನ್ನು ಇಲಾಖೆಯ ಉಪನಿದರ್ೇಶಕರ ಮೂಲಕ ಕಳುಹಿಸಿಕೊಡಿ. ಮಕ್ಕಳಿಗೆ ಗಾಳಿ, ಬೆಳಕು ಸಹಿತ ಅಗತ್ಯ ಮೂಲಸೌಕರ್ಯಗಳಿರುವ, ಓದುವ ಕೋಣೆ, ಊಟದ ಕೋಣೆ ಹೊಂದಿರುವ ಕಟ್ಟಡಗಳಲ್ಲಿ ವಸತಿ ನಿಲಯಗಳಿರಬೇಕು ಎಂದು ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಲಾಖೆಯಡಿ ನಿರ್ಮಾಣವಾಗಬೇಕಿರುವ ವಸತಿ ನಿಲಯಗಳು, ವಿವಿಧ ಸಮುದಾಯ ಭವನಗಳನ್ನು ನಿರ್ಮಿಸಲು ಅನುಷ್ಠಾನ ಏಜೆನ್ಸಿಗಳನ್ನು ನೇಮಿಸಲಾಗಿದೆ. ನಿಗದಿತ ಕಾಲಮಿತಿಯಲ್ಲಿ ಗುಣಮಟ್ಟದ ಕಟ್ಟಡಗಳನ್ನು ನಿರ್ಮಿಸಿ ಇಲಾಖೆಗೆ ಒಪ್ಪಿಸಬೇಕು. ಕಳಪೆ ಗುಣಮಟ್ಟದ ಕಟ್ಟಡಗಳಾಗಿದ್ದಲ್ಲಿ ಅದಕ್ಕೆ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲೂ ವಿವಿಧ ಅನುಷ್ಠಾನ ಎಜೆನ್ಸಿಗಳು ಇಲಾಖೆಯ ಕಟ್ಟಡಗಳ ನಿರ್ಮಾಣದಲ್ಲಿ ತೊಡಗಿವೆ. ಇದಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳು ಇದ್ದಲ್ಲಿ ವಸತಿ ನಿಲಯಗಳ ಮೇಲ್ವಿಚಾರಕರು, ತಾಲ್ಲೂಕು ಮಟ್ಟದ ಅಧಿಕಾರಿಗಳು ಜಿಲ್ಲಾಮಟ್ಟದ ಅಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಅನುಮೋದನೆಗೊಂಡ ಕಾಮಗಾರಿಗಳಿಗೆ ನಿವೇಶನ ಸೇರಿದಂತೆ ಕಾಮಗಾರಿ ಆರಂಭಕ್ಕೆ ಇರುವ ಎಲ್ಲ ಸಿದ್ಧತೆಗಳನ್ನು ಮೂರು ತಿಂಗಳೊಳಗೆ ಆರಂಭಿಸಬೇಕು. ಇಲ್ಲವಾದಲ್ಲಿ ಅನುದಾನವನ್ನು ಹಿಂಪಡೆಯಲಾಗುತ್ತದೆ. ಹಾಗೂ ಮತ್ತೆ ಆ ಅನುದಾನವನ್ನು ಮರಳಿ ಪಡೆಯುವುದು ಸುಲಭವಲ್ಲ. ಆದ್ದರಿಂದ ಈಗಾಗಲೇ ಅನುಮೋದನೆ ದೊರೆತ ಕಾಮಗಾರಿಗಳನ್ನು ಆರಂಭಿಸಿ, ಈಗಾಗಲೇ ಆರಂಭಿಸಿರುವ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಿ. ಕಾಮಗಾರಿ ಪೂರ್ಣಗೊಂಡ ಕುರಿತು ಭಾವಚಿತ್ರದೊಂದಿಗೆ ದಾಖಲೆಗಳನ್ನು ಸಲ್ಲಿಸಿ. ಒಂದು ವೇಳೆ ನಿಗದಿತ ಅವಧಿಯಲ್ಲಿ ಅನುದಾನದ ಬಳಕೆಯಾಗದಿದ್ದಲ್ಲಿ ಅದಕ್ಕೆ ಸೂಕ್ತ ಕಾರಣಗಳನ್ನು ನೀಡಿ ಅನುದಾನವನ್ನು ಹಿಂದುರುಗಿಸಿ ಮತ್ತು ಅದನ್ನು ಇತರೆ ಅಭಿವೃದ್ಧಿ ಕಾಮಗಾರಿಗಾಗಿ ಬಳಸಿಕೊಳ್ಳಲು ಪ್ರಸ್ತಾವನೆ ಸಲ್ಲಿಸಿ ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾಥರ್ಿಗಳಿಗೆ ಪ್ರೋತ್ಸಾಹಧನ, ವಿಧವಾ ವೇತನ, ಸರಳ ವಿವಾಹವಾದ ದಂಪತಿಗಳಿಗೆ, ದೇವದಾಸಿಯರ ಮಕ್ಕಳ ವಿವಾಹಕ್ಕೆ ಪ್ರೋತ್ಸಾಹಧನ, ದೌರ್ಜನ್ಯಕ್ಕೆ ಒಳಗಾದವರಿಗೆ ಪರಿಹಾರ ಧನ, ಕಾನೂನು ಪದವೀಧರರಿಗೆ ಪ್ರೋತ್ಸಾಹ ಧನವನ್ನು ವಿವಿಧ ಕಾರ್ಯಕ್ರಮಗಳ ಮೂಲಕ ನೀಡಲಾಗುತ್ತಿದೆ. ಇವುಗಳು ಅರ್ಹರನ್ನು ತಲುಪಬೇಕು. ಹಾಗೂ ಫಲಾನುಭವಿಗಳನ್ನು ಗುರುತಿಸುವಲ್ಲಿ ಸಕರ್ಾರದ ಮಾನದಂಡಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಅಲ್ಲದೇ ಮುಖ್ಯಮಂತ್ರಿಗಳ ಮಾದರಿ ಗ್ರಾಮ ಯೋಜನೆ ಹಾಗೂ ಪ್ರಧಾನ ಮಂತ್ರಿಗಳ ಮಾದರಿ ಗ್ರಾಮ ಯೋಜನೆಯಡಿ ಗ್ರಾಮಗಳ ಅಭಿವೃದ್ಧಿಗೆ ನಿರ್ಧಿಷ್ಟ ಗ್ರಾಮವನ್ನು ಆಯ್ಕೆ ಮಾಡಿಕೊಳ್ಳುವಾಗಲೂ ಕೂಡಾ ಸರ್ಕಾರದ ಮಾನದಂಡಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದ ಅವರು ಇಲಾಖೆಯ ಇತರೆ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಹೆಚ್ಚುವರಿ ನಿರ್ದೇಶಕರಾದ ಗಣೇಶಪ್ಪ ಎಂ, ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಲಕ್ಷ್ಮಣ ಬಬಲಿ, ನಿರ್ಮಿತಿ ಕೇಂದ್ರದ ಅಧಿಕಾರಿ ಶಶಿಧರ ಸೇರಿದಂತೆ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು, ವಸತಿ ನಿಲಯಗಳ ಮೇಲ್ವಿಚಾರಕರು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.