ಇಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ
ಬೆಂಗಳೂರು, ಸೆ 6 : ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ನೇಮಕವಾದ ಬಳಿಕ ಇದೇ ಮೊದಲ ಬಾರಿ ಪಕ್ಷದ ಕಚೇರಿ ಜಗನ್ನಾಥ ಭವನದಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಇಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ. ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಆರ್. ಅಶೋಕ್, ಈಶ್ವರಪ್ಪ, ಸಿ.ಟಿ ರವಿ, ಶಾಸಕ ಸಿ.ಎಂ ಉದಾಸಿ, ಅರವಿಂದ ಲಿಂಬಾವಳಿ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ ಹಾಗೂ ಡಿ.ವಿ. ಸದಾನಂದಗೌಡ ಭಾಗವಹಿಸಲಿದ್ದಾರೆ. ಪಕ್ಷ ಹಾಗೂ ಸರ್ಕಾರದ ನಡುವೆ ಸಮನ್ವಯತೆ ಕಾಯ್ದುಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಜತೆಗೆ, ಪಕ್ಷ ಸಂಘಟನೆ, ಪಕ್ಷದ ಆಂತರಿಕ ಚುನಾವಣೆಗಳು, ಹೊಸ ಪದಾಧಿಕಾರಿಗಳ ನೇಮಕ ವಿಚಾರದ ಬಗ್ಗೆಯೂ ಚರ್ಚೆ ನಡೆಯಲಿದೆ. ಸಂಪುಟ ವಿಸ್ತರಣೆಯಿಂದಾಗಿ ಉಂಟಾದ ಅಸಮಾಧಾನದಿಂದ ಪಕ್ಷದ ಮೇಲಾಗಿರುವ ದುಷ್ಪರಿಣಾಮಗಳು, ಸಚಿವ ಸ್ಥಾನ ವಂಚಿತರಿಂದಾಗಿ ಪಕ್ಷಕ್ಕಾದ ಹಾನಿ ನಿಯಂತ್ರಣ ಮಾಡುವ ಕುರಿತು ಹಾಗೂ ಅನರ್ಹರ ಮುಂದಿನ ಭವಿಷ್ಯದ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 