ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
State Budget presentation on March 7: Chief Minister Siddaramaiah
ಬೆಂಗಳೂರು 17: 2025-26ನೇ ಸಾಲಿನ ಬಜೆಟ್ ಮಾರ್ಚ್ 7ರಂದು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ, ರೈತ ಸಮುದಾಯದ ಕುಂದುಕೊರತೆ, ಬೇಡಿಕೆಗಳನ್ನು ಆಲಿಸಿದರು. ಬಳಿಕ ಸುದ್ದಿಗಾರರಿಗೆ ಬಜೆಟ್ ಮಂಡನೆಯ ಬಗ್ಗೆ ಮಾಹಿತಿ ನೀಡಿದರು.
ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತದೆ. ಮಾರ್ಚ್ 7ರಂದು ಬಜೆಟ್ ಮಂಡಿಸುತ್ತೇನೆ. ಬಳಿಕ 3 ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಯಾಗುತ್ತದೆ ಎಂದು ತಿಳಿಸಿದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 