10 ಮಂದಿ ನೂತನ ಸಚಿವರ ಸೇರ್ಪಡೆಯೊಂದಿಗೆ 28ಕ್ಕೇರಿದ ರಾಜ್ಯ ಸಂಪುಟ ಗಾತ್ರ: ಒಕ್ಕಲಿಗರ ಮೇಲುಗೈ
ಬೆಂಗಳೂರು, ಫೆ.6, ಬಿ.ಎಸ್.ಯಡಿಯೂರಪ್ಪ ಅವರ ಸಂಪುಟಕ್ಕೆ ಇಂದು 10 ಮಂದಿ ನೂತನ ಸಚಿವರು ಸೇರ್ಪಡೆಯಾಗುವುದರೊಂದಿಗೆ ಸಂಪುಟದ ಗಾತ್ರ 28ಕ್ಕೇರಿದ್ದು, ಒಕ್ಕಲಿಗರೇ ಮೇಲುಗೈ ಸಾಧಿಸಿದ್ದಾರೆ. ಇಂದು ಪ್ರಮಾಣ ವಚನ ಸ್ವೀಕರಿಸಿದ 10 ಮಂದಿ ನೂತನ ಸಚಿವರ ಪೈಕಿ ನಾಲ್ವರು ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿದ್ದು, ಇಬ್ಬರು ಲಿಂಗಾಯತ, ಓರ್ವ ಜೈನ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಶ್ರೀಮಂತ ಪಾಟೀಲ್ ಅವರು ಮರಾಠ, ಶಿವರಾಂ ಹೆಬ್ಬಾರ್ ಬ್ರಾಹ್ಮಣ, ಭೈರತಿ ಬಸವರಾಜ ಕುರುಬ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ರಮೇಶ್ ಜಾರಕಿಹೊಳಿ ಅವರು ವಾಲ್ಮೀಕಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ.
ಕೆ.ಗೋಪಾಲಯ್ಯ, ಎಸ್.ಟಿ.ಸೋಮಶೇಖರ್, ಕೆ.ನಾರಾಯಣ ಗೌಡ, ಕೆ.ಸುಧಾಕರ್ ಅವರು ಒಕ್ಕಲಿಗ ಸಮುದಾಯಕ್ಕೆ ಸೇರಿದವರು.ಬೆಂಗಳೂರು ಮತ್ತು ಬೆಳಗಾವಿಗೆ ಅರ್ಧದಷ್ಟು ಸ್ಥಾನ ದೊರಕಿದ್ದರೆ, ಇತರ ಜಿಲ್ಲೆಗಳನ್ನು ಸಂಪೂರ್ಣ ಕಡೆಗಣಿಸಲಾಗಿದೆ. ಮಧ್ಯ ಕರ್ನಾಟಕ, ಹಳೆಯ ಮೈಸೂರು, ಕರಾವಳಿ ಭಾಗವನ್ನು ನಿರ್ಲಕ್ಷಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.10 ಮಂದಿಯ ಪೈಕಿ 8 ಮಂದಿ ಮೊದಲ ಬಾರಿಗೆ ಸಚಿವರಾದವರಾಗಿದ್ದಾರೆ. ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿ ಈ ಹಿಂದೆಯೂ ಸಚಿವರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಚಿವಾಕಾಂಕ್ಷಿಗಳಾಗಿದ್ದ ಮುರುಗೇಶ್ ನಿರಾಣಿ, ಯೋಗೇಶ್ವರ್, ಉಮೇಶ್ ಕತ್ತಿ ಸೇರಿದಂತೆ ಇತರರು ಗೈರು ಹಾಜರಾಗುವ ಮೂಲಕ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಸಚಿವರಾದ ಕೆ.ಎಸ್. ಈಶ್ವರಪ್ಪ, ಶ್ರೀರಾಮುಲು ಕೂಡ ಗೈರಾಗಿದ್ದರು.
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ 