ಬೆಳಗಾವಿ 09: ವಿವಿಧ ಬೇಡಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಸೋಮವಾರ ಸುವರ್ಣ ಸೌಧದ ಬಳಿಯ ಸುವರ್ಣ ಗಾರ್ಡನ್ ಟೆಂಟ್‌ನಲ್ಲಿ ಸರ್ಕಾರದ ವಿರುದ್ಧ ನೂರಾರು ರೈತರು ಘೋಷಣೆ ಕೂಗಿ ಪ್ರತಿಭಟಿಸಿದರು. ರಾಜ್ಯ ಸರ್ಕಾರ ಮೂರು ಕೃಷಿ ಕಾಯ್ದೆಗಳು ವಾಪಸ ಪಡೆಯಬೇಕು. ರೈತ ಬೆಳೆದ ಬೆಳೆಗೆ ಕಾನೂನಾತ್ಮಕ ದರ ನಿಗದಿ ಪಡಿಸಬೇಕು. ವಿದ್ಯುತ್ ಪರಿಕರಗಳನ್ನು ಉಚಿತವಾಗಿ ವಿತರಿಸುತ್ತಿದ್ದು ಅದನ್ನು ಮುಂದುವರಿಸಬೇಕು. ರಾಜ್ಯ ಸರ್ಕಾರ ಕಬ್ಬಿಗೆ ಪ್ರತಿ ಟನ್‌ಗೆ 3,500 ನಿಗದಿ ಪಡಿಸಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಕರಾಳ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡಬೇಕು. ರಾಜ್ಯದ ನೀರಾವರಿ ಯೋಜನೆಗಳಾದ ಮಾದಾಯಿ, ಕಳಸಾ ಬಂಡೂರಿ, ಕೃಷ್ಣ, ತುಂಗಭದ್ರಾ ನದಿಗೆ ನವಲಿ ಹತ್ತಿರ ಸಮಾನಾಂತರ ಜಲಾಶಯ ನಿರ್ಮಾಣ ಮಾಡಬೇಕು. ಚಾಮರಾಜ ನಗರ ಜಿಲ್ಲೆ ಹಾಗೂ ಗುಂಡ್ಲ ಪೇಟೆ ತಾಲೂಕಿನ ಗಾಂಧಿ ಗ್ರಾಮದ ಕೆರೆಗಳಿಗೆ ನೀರು ತುಂಬಿಸಬೇಕು ಜೊತೆಗೆ ವಿವಿಧ ಬೇಡಿಕೆಗೆ ಒತ್ತಾಯಿಸಿ ಪ್ರತಿಭಟಿಸಲಾಯಿತು.