ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತರಿಂದ ಫೆ.20, 21 ರಂದು ಕೊಪ್ಪಳ ಜಿಲ್ಲಾ ಪ್ರವಾಸ
State Information Commissioner of Kalaburagi Bench to visit Koppal district on Feb. 20th and 21st
ಲೋಕದರ್ಶನ ವರದಿ
ಕೊಪ್ಪಳ 18 : ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಬಿ.ವೆಂಕಟ್ ಸಿಂಗ್ ಅವರು ಫೆಬ್ರವರಿ 20 ಮತ್ತು 21 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಆಯುಕ್ತರು ಫೆ.20 ರಂದು ಸಂಜೆ 7 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ, ಕೊಪ್ಪಳದಲ್ಲಿ ವಾಸ್ತವ್ಯ ಮಾಡುವರು. ಫೆ.21 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತದಿಂದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಯೋಜಿಸಿರುವ ಮಾಹಿತಿ ಹಕ್ಕು ಕಾಯ್ದೆಯ ಕುರಿತ ಕಾರ್ಯಾಗಾರದಲ್ಲಿ ಆಯಾ ಇಲಾಖೆಯ ಅಧಿಕಾರಿ, ಸಿಬ್ಬಂದಿಯೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 1.30 ಗಂಟೆಗೆ ಪತ್ರಿಕಾ ಗೋಷ್ಠಿ ನಡೆಸುವರು. ಸಂಜೆ 4 ಗಂಟೆಗೆ ಕೊಪ್ಪಳದಿಂದ ನಿರ್ಗಮಿಸಿ ಕಲಬುರಗಿ ಕಡೆಗೆ ಪ್ರಯಾಣ ಬೆಳೆಸುವರು ಎಂದು ಆಯುಕ್ತರ ಆಪ್ತ ಸಹಾಯಕ ಶಿವಾನಂದ ಬಿರಾದಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 