ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ
State Level Ball Badminton Tournament
ವಿಜಯಪುರ ನ. 28: ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯದಲ್ಲಿ ಬುಧವಾರ ನಡೆಯಿತು.
ಮಹಾವಿದ್ಯಾಲಯದ ವತಿಯಿಂದ ಸಂಘಟಿಸಲಾಗಿರುವ ಈ ಪಂದ್ಯಾವಳಿಯನ್ನು ಬಿ.ಎಲ್.ಡಿ.ಇ ಸಂಸ್ಥೆಯ ಹಿರಿಯ ಕ್ರೀಡಾ ನಿರ್ದೇಶಕ ಎಸ್. ಎಸ್. ಕೋರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವೀಕ್ಷಕ ಮತ್ತು ದಾವಣಗೆರೆ ಅರ್ಜುನ ಜೆ. ಜೆ. ಎಂ ನರ್ಸಿಂಗ ಕಾಲೇಜಿನ ಡಾ. ಸುರೇಶ. ಎಸ್. ಎಂ., ವಿಜಯಪುರ ಬಿ.ಎನ್.ಎಥ್ ಆಯುರ್ವೇದ ಕಾಲೇಜಿನ ನಜೀರ ಮಮದಾಪುರ, ಎವಿಎಸ್ ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ ್ಲ ಡಾ. ಗಂಗಾಧರ ತಿಮ್ಮಾಪುರ, ಡಾ. ಜೋಸ್ನಾ ಬರಗಿ, ಹನುಮಂತ ಪವಾರ ಉಪಸ್ಥಿತರಿದ್ದರು.
ಈ ಪಂದ್ಯಾವಳಿಯಲ್ಲಿ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಅಡಿಯಲ್ಲಿ ಬರುವ ವೈದ್ಯಕೀಯ, ದಂತ ಆಯುರ್ವೇದ, ಹೊಮಿಯೋಪತಿ, ಯುನಾನಿ, ಫಾರ್ಮಸಿ, ನರ್ಸಿಂಗ್ ಮುಂತಾದ ಆರೋಗ್ಯ ವಿಜ್ಞಾನ ವಿದ್ಯಾಲಯಗಳ ರಾಜ್ಯಾದ್ಯಂತ ಪುರುಷರ ಎಂಟು ಮತ್ತು ಮಹಿಳೆಯರ ಏಳು ತಂಡಗಳು ಭಾಗವಹಿಸಿವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 