ಮಾರ್ಚ್‌ 9 ರಂದು ರಾಜ್ಯ ಮಟ್ಟದ ಪತ್ರಕರ್ತರ ದತ್ತಿ ಪ್ರಶಸ್ತಿ ಸಮಾರಂಭದ

State Level Journalist Endowment Award Ceremony on March 9

ಮಾರ್ಚ್‌ 9 ರಂದು ರಾಜ್ಯ ಮಟ್ಟದ ಪತ್ರಕರ್ತರ ದತ್ತಿ ಪ್ರಶಸ್ತಿ ಸಮಾರಂಭದ

ಯಲಬುರ್ಗಾ 28: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಜ್ಯ ಮಟ್ಟದ ಪತ್ರಕರ್ತರ ದತ್ತಿ ಪ್ರಶಸ್ತಿ ಸಮಾರಂಭದ ಯಶಸ್ವಿಗೆ ಸಹಕಾರ ನೀಡಬೇಕು ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಹನುಮಂತ ಹಳ್ಳಿಕೇರಿ ಹೇಳಿದರು.  

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಾಜ್ಯದ ಮಟ್ಟದ ದತ್ತಿ ಪ್ರಶಸ್ತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.  ಕೊಪ್ಪಳದಲ್ಲಿ ಮಾರ್ಚ್‌ 9 ರಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ಘಟಕದ ವತಿಯಿಂದ ರಾಜ್ಯದ ಮಟ್ಟದ ದತ್ತಿ ಪ್ರಶಸ್ತಿ ಹಾಗೂ ರಾಜ್ಯ ಕಾರ್ಯಕಾರಣಿ ಸಭೆ ನಡೆಯಲಿದೆ. ನಮ್ಮ ಸಂಘದ ರಾಜಾಧ್ಯಕ್ಷರಾದ ಶಿವಾನಂದ ತಗಡೂರು ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.  

ಕೊಪ್ಪಳ ಗವಿಮಠದ ಶ್ರೀಗಳು ಸಾನಿಧ್ಯ ವಹಿಸಲಿದ್ದಾರೆ ಎಂದರು. ಕೊಪ್ಪಳ ವಿವಿ ಸಹಯೋಗದಲ್ಲಿ ವಹಿಸಲಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾ ಮಟ್ಟದ ಸಂಘದ ಪ್ರತಿನಿಧಿಗಳು ಆಗಮಿಸಲಿದ್ದಾರೆ. ಒಂದು ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಪತ್ರಕರ್ತರು ಬರುವ ನೀರೀಕ್ಷೆವಿದೆ. ಹೀಗಾಗಿ ಜಿಲ್ಲಾ ಘಟಕದ ಸೂಚಿಸುತ್ತಿರುವ ಜವಾಬ್ದಾರಿಯನ್ನು ಆಯಾ ತಾಲೂಕು ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು, ಅದ್ದೂರಿಯಾಗಿ ಸಮ್ಮೇಳನದ ಮಾದರಿಯಲ್ಲಿ ಈ ದತ್ತಿ ಪ್ರಶಸ್ತಿ ಸಮಾರಂಭ ನಡೆಯಲಿದ್ದು ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪತ್ರಕರ್ತರು ಪಾಲ್ಗೊಳ್ಳಬೇಕೆಂದರು.  ಸಂಘದ ರಾಜ್ಯ ಸಮಿತಿಯ ಸದಸ್ಯ ಎಂ ಸಾಧಿಕ ಅಲಿ ಹಾಗೂ ರಾಜ್ಯ ವಿಶೇಷ ಕಾರ್ಯಕಾರಣಿ ಸದಸ್ಯ ಹೆಚ್‌.ಎಸ್‌. ಹರೀಶ ಮಾತನಾಡಿ, ತಾಲೂಕು ಘಟಕದ ಎಲ್ಲಾ ಪತ್ರಕರ್ತರು ದತ್ತಿ ಪ್ರಶಸ್ತಿ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೆ ಸಹಕಾರ ನೀಡಬೇಕು,ಅಲ್ಲದೇ ರಾಜ್ಯದ್ಯಂತ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಕೊಪ್ಪಳಕ್ಕೆ ಆಗಮಿಸುತ್ತಿದ್ದಾರೆ. ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಸಮಾರಂಭ ಯಶಸ್ವಿಗೆ ಕಾರಣಿಭೂತರಾಗಬೇಕು, ಎಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದರು.  

 ಈ ವೇಳೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೈ.ನಾಗರಾಜ, ಜಿಲ್ಲಾ ಕಾರ್ಯದರ್ಶಿ ವೀರಣ್ಣ ಕಳ್ಳಿಮನಿ, ಆರಿ​‍್ಬ.ರಾಜು, ಮಂಜುನಾಥ ಅಂಗಡಿ, ತಾಲೂಕು ಅಧ್ಯಕ್ಷ ಶಿವಮೂರ್ತಿ ಇಟಗಿ, ತಾಲೂಕು ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಮಾಟರಂಗಿ , ಸಂಘದ ಗೌರವಾಧ್ಯಕ್ಷ ಇಮಾಮ್ ಸಂಕನೂರು,ಹಾಗೂ ಸಂಘದ ಪದಾಧಿಕಾರಿಗಳು ಇದ್ದರು.  

 ( ಬ್ಸಾಕ್ ನ್ಯೂಸ್ ) ಕೊಪ್ಪಳ ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಪರ ಧ್ವನಿಯಾಗಿ ನಾನು ಪ್ರಾಮಾಣಿಕವಾಗಿ ಸೇವೆ ಮಾಡುವೆ. ಜಿಲ್ಲೆಯಲ್ಲಿ ನಡೆಯುವ ರಾಜ್ಯ ಮಟ್ಟದ ದತ್ತಿ ಪ್ರಶಸ್ತಿ ಹಾಗೂ ಕಾರ್ಯಕಾರಣಿಯ ವಾರ್ಷಿಕ ಸಭೆ ನಡೆಯಲಿದ್ದು ಸಂಘದ ರಾಜಾಧ್ಯಕ್ಷರಾದ ಶಿವಾನಂದ ತಗಡೂರ ನೇತೃತ್ವದಲ್ಲಿ ನಮ್ಮ ಪತ್ರಕರ್ತರು ಸಂಘವು ಕ್ರಿಯಾಶೀಲವಾಗಿ ಬೆಳೆಯುತ್ತಿದೆ. ಪತ್ರಕರ್ತರ ಇತಕ್ಕಾಗಿ ತಗಡೂರವರು ಶ್ರಮಿಸುತ್ತಿದ್ದಾರೆ. ಜಿಲ್ಲೆಯ ಎಲ್ಲಾ ಪತ್ರಕರ್ತರು ಕಾರ್ಯಕ್ರಮದ ಯಶಸ್ವಿಗೆ ಸಹಕಾರ ನೀಡಿ.