ಗಜೇಂದ್ರಗಡ 10: ಗಜೇಂದ್ರಗಡದಲ್ಲಿ 2ನೇ ಬಾರಿಗೆ ರಾಜ್ಯ ಮಟ್ಟದ ಯುವಜನ ಮೇಳವನ್ನು ಫೆ.14 ರಿಂದ 16 ವರೆಗರ ನಡೆಯಲಿದ್ದು ಪೂರ್ವಸಿದ್ದತಾ ಪರಿಶೀಲನೆ ಸಭೆ ಜರುಗಿತು.
ಗಜೇಂದ್ರಗಡ ಎಪಿಎಂಸಿ ಎದುರಿಗಿನ ಬಯಲಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಯುವಜನ ಮೇಳ ಕುರಿತ ಭದ್ರತೆ, ವೇದಿಕೆ ಅಲಂಕಾರ, ಸ್ಮರಣ ಸಂಚಿಕೆ , ಆಹ್ವಾನ ಪತ್ರಿಕೆ, ಸ್ವಚ್ಛತೆ, ಕುಡಿಯುವ ನೀರು, ಸ್ಪಧರ್ಾಳುಗಳಿಗೆ ಗುರುತಿನ ಚೀಟಿ ನೀಡುವಿಕೆ, ಹಾಗೂ ಅವರಿಗೆ ಸಾರಿಗೆ, ವಸತಿ, ಊಟೋಪಹಾರ ಮುಂತಾದ ವ್ಯವಸ್ಥೆಗಳ ಸಿದ್ಧತೆ ಕುರಿತು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಶಾಸಕರಾದ ಕಳಕಪ್ಪ ಬಂಡಿ ಅವರು ಪರಿಶೀಲಿಸಿ ಸೂಚನೆಗಳನ್ನು ನೀಡಿ ರಾಜ್ಯ ಮಟ್ಟದ ಯುವಜನ ಸಮ್ಮೇಳನ ವ್ಯವಸ್ಥಿತವಾಗಿ ಯಶಸ್ವಿಯಾಗಿ ನಡೆಸಲು ಜವಾಬ್ದಾರಿಯುತವಾಗಿ ಕಾಳಜಿಯಿಂದ ಕಾರ್ಯ ನಿರ್ವಹಿಸಲು ತಿಳಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಬಿ.ಬಿ.ವಿಶ್ವನಾಥ ವೇದಿಕೆ, ವಸತಿ, ಸಾರಿಗೆ ಸೇರಿದಂತೆ ವಿವಿಧ ಸಮಿತಿಗಳ ಸಿದ್ಧತೆ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿದರ್ೆಶಕ ರುದ್ರೇಶ, ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ನರಗುಂದ ಡಿವೈಎಸ್ ಪಿ ಶಿವಾನಂದ ಕಟಗಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಖಾಜಾಹುಸೇನ ಮುಧೋಳ, ಪ.ಪೂ.ಶಿಕ್ಷಣ ಇಲಾಖೆ ಉಪನಿರ್ದೇಶಕ ಹಿರೇಮಠ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ನಾಗೂರ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಂಬಾಳಿಮಠ, ಪ್ರಾದೇಶಿಕ ಸಾರಿಗೆ ಅಧಿಕಾರಿ ಕುಮಾರಿ ವಿನಯಾ ಕೆ. ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ರೋಣ ತಹಶೀಲ್ದಾರ ಜಕ್ಕನಗೌಡರ, ರೋಣ ತಾಲೂಕಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಂತೋಷಕುಮಾರ್ ಪಾಟೀಲ, ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ ಸೇರಿದಂತೆ ತಾಲೂಕಾ ಮಟ್ಟದ ಅಧಿಕಾರಿಗಳು ನರೇಗಲ್ಲ, ರೋಣ ಪ.ಪಂ. ಮುಖ್ಯಾಧಿಕಾರಿಗಳು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಭೆಯಲ್ಲಿ ಭಾಗವಹಿಸಿದ್ದರು.