ಗದಗ 06: ವಿಶಿಷ್ಠಚೇತನರ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ವಿಶಿಷ್ಠಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ವಿಶ್ವ ವಿಶಿಷ್ಠಚೇತನರ ದಿನಾಚರಣೆಯ ಅಂಗವಾಗಿ ಮುಂಡರಗಿಯ ವಿಜಯಕುಮಾರ ಬಣಕಾರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿದೇಶಕ ಎನ್. ಸಿದ್ದೇಶ್ವರ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ನಿರ್ದೇಶಕ ರಾಘವೇಂದ್ರ ಟಿ., ಧಾರವಾಡ ಬಾಲವಿಕಾಸ ಅಕಡೆಮಿಯ ಅಧ್ಯಕ್ಷ ಸಂಗಮೇಶ್ವರ ಬಬಲೆಶ್ವರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.