ಅಧಿಕಾರದ ಗುದ್ದಾಟದಲ್ಲಿ ರೈತರನ್ನೇ ಮರೆತ ರಾಜ್ಯ ಸರ್ಕಾರ: ಗುರುಲಿಂಗನಗೌಡ
State government forgot farmers in its power struggle: Gurulinganagowda
ಬಳ್ಳಾರಿ 22: ರಂದು ಕೂಡಲೇ ರಾಜ್ಯ ಸರ್ಕಾರವು ರೈತರು ಬೆಳೆಯುವ ಪ್ರಮುಖ ಬೆಳೆಗಳು ಹೆಸರು, ಉದ್ದು, ನೆಲಗಡಲೆ, ಸೋಯಾಬೀನ್ ಮತ್ತು ಸೂರ್ಯಕಾಂತಿ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಖರೀದಿ ಕೇಂದ್ರಗಳನ್ನು ಆರಂಭಿಸಬೇಕೆಂದು ಬಿಜೆಪಿ ರೈತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಎಸ್.ಗುರುಲಿಂಗನಗೌಡ ಆಗ್ರಹಿಸಿದ್ದಾರೆ.
ಅವರು ಈ ಕುರಿತು ಲೋಕ ದರ್ಶನ ಪತ್ರಿಕೆ ಗೆ ಹೇಳಿಕೆ ನೀಡಿ, ಇತ್ತೀಚೆಗೆ ಸುರಿದ ಮಳೆಯಿಂದಾಗಿ ಕೆಲವೊಂದು ಬೆಳೆಗಳು ನೀರು ಪಾಲಾಗಿ ರೈತರು ನಷ್ಟವನ್ನು ಹೊಂದಿದ್ದರು. ಅಳಿದುಳಿದ ಬೆಳೆಗಳನ್ನು ಉಳಿಸಿಕೊಳ್ಳಲು ರೈತರು ಸಾಕಷ್ಟು ಹರಸಾಹಸ ಪಡುತ್ತಿದ್ದರು. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿತ್ತು. ಪಾರಂಪರಿಕ ಕೃಷಿ ಪ್ರಜ್ಞೆಯುಳ್ಳ ನಮ್ಮ ರೈತರು ಕೃಷಿಯಿಂದ ವಿಮುಖರಾಗಬಾರದು. ಕೃಷಿಯಲ್ಲಿ ಉತ್ತೇಜನ ಕಾಣಬೇಕು. ಸರ್ಕಾರಗಳು ರೈತರ ನೆರವಿಗೆ ಬರಬೇಕೆಂದು ಬಿಜೆಪಿ ರಾಜ್ಯಧ್ಯಕ್ಷ ಬಿವೈ ವಿಜಯೇಂದ್ರ ಅವರು ರಾಜ್ಯಾಧ್ಯಂತ ಸಂಚರಿಸಿ, ಬಳಿಕ ಕೇಂದ್ರದ ಆಹಾರ ಮತ್ತು ನಾಗರಿಕ ಸರಬರಾಜುಸಚಿವ ಪ್ರಹ್ಲಾದ ಜೋಶಿ ಅವರಿಗೆ ನಾಡಿನ ಅನ್ನದಾತ ಎದುರಿಸುತ್ತಿರುವ ಬವಣೆಗಳ ವರದಿ ನೀಡಿದ್ದರು .ಅವರು, ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚವ್ಹಾಣ್ ಅವರ ಗಮನ ಸೆಳೆದು, ಅವರು 2025-26ನೇ ಸಾಲಿನ ಮುಂಗಾರಿನಲ್ಲಿ ಬೆಳೆದ ಹೆಸರು ಕಾಳು, ಉದ್ದಿನ ಕಾಳು, ನೆಲಗಡಲೆ(ಶೇಂಗಾ), ಸೋಯಾ ಬಿನ್ ಮತ್ತು ಸೂರ್ಯಕಾಂತಿ ಧಾನ್ಯಗಳನ್ನು ಕೇಂದ್ರದ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ.ರಾಜ್ಯ ಸರ್ಕಾರ ಖರೀದಿ ಕೇಂದ್ರ ಆರಂಭಿಸಲಿ ಎನ್ನುವುದು ನಮ್ಮ ಆಗ್ರಹವಾಗಿದೆ.
ಕೇಂದ್ರದ ಬೆಂಬಲ ಬೆಲೆ ಯೋಜನೆಗೆ ರಾಜ್ಯವೂ ನೆರವು ನೀಡಬೇಕು. ತಕ್ಷಣ ಜಿಲ್ಲಾವಾರು ಖರೀದಿ ಕೇಂದ್ರ ತೆರೆದು ಧಾನ್ಯ ಖರೀದಿ ಪ್ರಕ್ರಿ ಯೆಗೆ ಚಾಲನೆ ನೀಡಬೇಕು ಹಾಗೂ ರಾಜ್ಯದ ರೈತರಿಗೆ ಅನುಕೂಲವಾಗಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 