ಕಿರಿಯ ವಯಸ್ಸಿನಲ್ಲೇ ರಾಜ್ಯಮಟ್ಟದ ಉತ್ತಮ ಉಪನ್ಯಾಸಕ ಪ್ರಶಸ್ತಿ: ಎನ್‌.ಎಸ್‌. ಕುರಬರಗೆ ಸನ್ಮಾನ

ಕಿರಿಯ ವಯಸ್ಸಿನಲ್ಲೇ ರಾಜ್ಯಮಟ್ಟದ ಉತ್ತಮ ಉಪನ್ಯಾಸಕ ಪ್ರಶಸ್ತಿ: ಎನ್‌.ಎಸ್‌. ಕುರಬರಗೆ ಸನ್ಮಾನ State-level 'Best Lecturer' award at a young age: N.S. Kurabara felicitated


ಚಿಕ್ಕೋಡಿ 08: ಕಿರಿಯ ವಯಸ್ಸಿನಲ್ಲೇ ರಾಜ್ಯಮಟ್ಟದ ಉತ್ತಮ ಉಪನ್ಯಾಸಕ ಪ್ರಶಸ್ತಿಗೆ ಭಾಜನರಾದ ಚಿಕ್ಕೋಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಎನ್‌.ಎಸ್‌. ಕುರಬರ ಅವರನ್ನು ಚಿಕ್ಕೋಡಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಚಿಕ್ಕೋಡಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಲಿಂಗರಾಜು ಹಾಗೂ ನಿವೃತ್ತ ಉಪನಿರ್ದೇಶಕ ಪಾಂಡುರಂಗ ಭಂಡಾರಿ ಅವರು ಪ್ರಶಸ್ತಿ ವಿಜೇತ ಉಪನ್ಯಾಸಕ ಎನ್‌.ಎಸ್‌. ಕುರಬರ ಅವರನ್ನು ಸನ್ಮಾನಿಸಿದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ಎನ್‌.ಎಸ್‌. ಕುರಬರ, ಕಳೆದ 15 ವರ್ಷಗಳಿಂದ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ರಾಜ್ಯ ಸರಕಾರ ಉತ್ತಮ ಉಪನ್ಯಾಸಕ ಪ್ರಶಸ್ತಿ ನೀಡಿರುವುದು.

ಸಂತಸ ತಂದಿದೆ. ಅದರಲ್ಲಿಯೂ ಕಿತ್ತೂರು ಕರ್ನಾಟಕ ಭಾಗದಿಂದ ತಾವು ಒಬ್ಬರೇ ಪ್ರಶಸ್ತಿಗೆ ಆಯ್ಕೆಯಾಗಿರುವುದು ಮತ್ತಷ್ಟು ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದರು.ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಹಕಾರ ಹಾಗೂ ಕಾಲೇಜಿನ ಉಪನ್ಯಾಸಕರ ಬಳಗದ ಪ್ರೋತ್ಸಾಹವೇ ಪ್ರಶಸ್ತಿಗೆ ಆಯ್ಕೆಯಾಗಲು ಪ್ರೇರಣೆಯಾಗಿದೆ. ಮುಂದಿನ ದಿನಗಳಲ್ಲಿಯೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಅವರು ಹೇಳಿದರು.ಈ ಸಂದರ್ಭದಲ್ಲಿ ನಿವೃತ್ತ ಪ್ರಾಚಾರ್ಯ ಆನಂದ ಕೋಳಿ, ಕಚೇರಿ ಸಿಬ್ಬಂದಿಗಳಾದ ವಿಠ್ಠಲ ಬಡಾಯಿ, ಬಸವರಾಜ ಮಾಧ್ಯಾಳಿ, ರೂಪೇಶ, ಸಚಿನ್ ಕಮತರ, ಅಭಿಜೀತ್, ಕುಮಾರಿ ಜಯಶ್ರೀ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.