ಕಬ್ಬೆನೂರಿನ ಕಾಮಧೇನು ಸಂಜೀವಿನಿ ಮಹಿಳಾ ಸ್ವ-ಸಹಾಯ ಸಂಘಕ್ಕೆ ರಾಜ್ಯಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ
State-level Kittur Rani Chennamma Award presented to Kamadhenu Sanjeevini Women's Self-Help Associat
ಲೋಕದರ್ಶನ ವರದಿ
ಹುಬ್ಬಳ್ಳಿ ಮಾ.25: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 2026 ರ ಅಂಗವಾಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪ್ರತಿ ವರ್ಷ ನೀಡಲಾಗುವ ಪ್ರತಿಷ್ಠಿತ 2025ಹಿ26ನೇ ಸಾಲಿನ ರಾಜ್ಯಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ಮಹಿಳೆಯರ ಸಾಮಾಜಿಕ ಅಭಿವೃದ್ಧಿಯಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಧಾರವಾಡ ಜಿಲ್ಲೆಯ ಕಬ್ಬೆನೂರು ಗ್ರಾಮದ ಕಾಮಧೇನು ಸಂಜೀವಿನಿ ಮಹಿಳಾ ಸ್ವ-ಸಹಾಯ ಸಂಘಕ್ಕೆ ಪ್ರದಾನ ಮಾಡಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ನಿನ್ನೆ (ಮಾ.24) ಸಂಜೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಜರುಗಿದ ಸಮಾರಂಭದಲ್ಲಿ ಸಂಘದ ಪ್ರತಿನಿಧಿಯನ್ನು ಸನ್ಮಾನಿಸಿ ಗೌರವಿಸಿ, ಪ್ರಶಸ್ತಿ ಪ್ರಧಾನ ಮಾಡಿದರು.
ಪ್ರಶಸ್ತಿಯನ್ನು ಕಾಮಧೇನು ಸಂಜೀವಿನಿ ಮಹಿಳಾ ಸ್ವ-ಸಹಾಯ ಸಂಘ ಪ್ರತಿನಿಧಿ-1 ಆಗಿರುವ ರಾಜೇಶ್ವರಿ ಮಂಜುನಾಥ ಪವಾಡಿ ಅವರು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಮಹಿಳಾ ಸ್ವ ಸಹಾಯ ಸಂಘದ ಪ್ರತಿನಿಧಿಗಳು, ಸದಸ್ಯರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 