ರಾಜ್ಯಮಟ್ಟದ ಸೇವಾ ಸರ್ವೋತ್ತಮ ಪ್ರಶಸ್ತಿ ಪ್ರದಾನ ಸಮಾರಂಭ

State-level Seva Parvottam Award Ceremony

ಲೋಕದರ್ಶನ ವರದಿ 

ರಾಜ್ಯಮಟ್ಟದ ಸೇವಾ ಸರ್ವೋತ್ತಮ ಪ್ರಶಸ್ತಿ ಪ್ರದಾನ ಸಮಾರಂಭ  

ಬೆಳಗಾವಿ,ಏ.21 : ಜಿಲ್ಲೆಯ ವಿಕಲಚೇತನರ ಕಲ್ಯಾಣ ಹಾಗೂ ಹಿರಿಯ ನಾಗರಿಕರ ಸಬಲೀಕರಣದ ನಿಟ್ಟಿನಲ್ಲಿ ಹಲವಾರು ವರ್ಷಗಳಿಂದ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ನಾಮದೇವ ಬಿಲ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯಮಟ್ಟದ ಸೇವಾ ಸರ್ವೋತ್ತಮ ಪ್ರಶಸ್ತಿಯನ್ನು ಪ್ರಧಾನ ಮಾಡಿದರು.  

ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಸೋಮವಾರ (ಏ.21) ಜರುಗಿದ ಸರಕಾರಿ ನೌಕರರ ದಿನಾಚರಣೆ ಮತ್ತು ವಿವಿಧ ಸಾಲಿನ ರಾಜ್ಯಮಟ್ಟದ ಸೇವಾ ಸರ್ವೋತ್ತಮ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.  

ಪ್ರಶಸ್ತಿ ಲಭಿಸಿ ಲಭಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ನಾಮದೇವ ಬಿಲ್ಕರ್ ಅವರು, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಇಲಾಖೆಯ ಉಪ ನಿರ್ದೇಶಕರ ಮಾರ್ಗದರ್ಶನ ಮತ್ತು ಸಹಕಾರದಿಂದ ವಿಕಲಚೇತನರ ಕಲ್ಯಾಣಕ್ಕಾಗಿ ಉತ್ತಮ ಸೇವೆ ಸಲ್ಲಿಸಲು ಸಾಧ್ಯವಾಗಿರುತ್ತದೆ ಎಂದು ತಿಳಿಸಿದ್ದಾರೆ.  

ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಗ್ರಾಮೀಣ ಪುನರ್ವಸತಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ವಿಕಲಚೇತನ ಪುರ್ನವಸತಿ ಕಾರ್ಯಕರ್ತರು, ನೋಡಲ್ ಅಧಿಕಾರಿಗಳು ಮತ್ತು ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.  



ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ 

ಬೆಳಗಾವಿ,ಏ.21 :  ಶಿಶು ಅಭಿವೃದ್ಧಿ ಯೋಜನೆ ರಾಯಬಾಗ ವ್ಯಾಪ್ತಿಯ ಗ್ರಾಮ ಪಂಚಾಯತ, ಪುರಸಭೆ ಮತ್ತು ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಖಾಲಿ ಇರುವ 12 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 82 ಸಹಾಯಕಿಯರ ಹುದ್ದ್ಕೆಗಳಿಗೆ ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿಗಳನ್ನು ವೆಬ್‌ಸೈಟ್ ಣಣಠಿ://ಞಚಿಡಿಟಿಜಟಚಿಞಚಿಠಜ.ಞಚಿಡಿ.ಟಿಛಿ.ಟಿ/ಚಿಛಛಿಜ/ ಮೂಲಕ ಮೇ. 16, 2025 ರ ಒಳಗಾಗಿ ಸಲ್ಲಿಸಬಹುದಾಗಿದೆ.  

ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ, ಚಿಂಚಲಿ ರೋಡ ರಾಯಬಾಗ.  ದೂರವಾಣಿ ಸಂಖ್ಯೆ: 08331-225292 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ರಾಯಬಾಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

*****