ಮಹಾಂತೇಶ ನಾಯ್ಕೋಡಿಗೆ ರಾಜ್ಯ ಮಟ್ಟದ ಪ್ರಶಸ್ತಿ ಗರಿ
ಶಿಗ್ಗಾವಿ 09: ತಾಲೂಕಿನ ತಿಮ್ಮಾಪೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕ್ರಿಯಾಶೀಲ ಶಿಕ್ಷಕ ಮಹಾಂತೇಶ ನಾಯ್ಕೋಡಿಯವರಿಗೆ 2024-25 ನೇ ಸಾಲಿನ ಪ್ರಾಥಮಿಕ ಶಾಲಾ ಶಿಕ್ಷಕರ ರಾಜ್ಯ ಮಟ್ಟದ ಸಹಪಠ್ಯ ಚಟುವಟಿಕೆಯ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಶಿವಮೋಗ್ಗದ ಸೀಮಾ ಆಂಗ್ಲ ಮಾದ್ಯಮ ಪ್ರೌಢ ಶಾಲೆಯಲ್ಲಿ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಗಿದ್ದು, ಕ್ರಿಯಾಶೀಲ ಶಿಕ್ಷಕರ ಈ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಬಿ ಅಂಬಿಗೇರ, ಕಸಾಪ ಅದ್ಯಕ್ಷ ನಾಗಪ್ಪ ಬೆಂತೂರ, ತಾಲೂಕಾ ನೌಕರರ ಸಂಘದ ಅದ್ಯಕ್ಷ ಅರುಣ ಹುಡೇದಗೌಡ್ರ, ಕಸಾಪ ಕಾರ್ಯದರ್ಶಿ ರಮೇಶ ಹರಿಜನ, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು, ಮುಖ್ಯ ಶಿಕ್ಷಕರು ಸೇರಿದಂತೆ, ತಾಲೂಕಿನ ಶಿಕ್ಷಕರು, ಸಾಹಿತ್ಯಾಭಿಮಾನಿಗಳು ಅಭಿನಂದಿಸಿದ್ದಾರೆ.