ವಿಜಯಪುರದಲ್ಲಿ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟ ಉದ್ಘಾಟನೆ
State level badminton tournament inaugurated in Vijayapura
ರಾಷ್ಟ್ರ ಮಟ್ಟದ ಬ್ಯಾಡ್ಮಿಂಟನ್ ಆಯೋಜಿಸಿದರೆ ಸಹಕಾರ
ಕ್ರೀಡಾ ಚಟುವಟಿಕೆಗಳಿಂದ ಜಿಲ್ಲೆಗೆ ಹೊಸ ಓಟ್‌ಲುಕ್: ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅಭಿಮತ
ವಿಜಯಪುರ 17 : ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಶನ್ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟವನ್ನು ವಿಜಯಪುರದಲ್ಲಿ ಆಯೋಜಿಸುವ ಮೂಲಕ ಈ ಬೃಹತ್ ಕ್ರೀಡಾಕೂಟವು ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಆಯೋಜನೆಗೊಂಡಿದ್ದು, ವಿಜಯಪುರ ನಗರಕ್ಕೆ ಹೊಸ ಓಟ್‌ಲುಕ್ ನೀಡಿದೆ ಎಂದು ಬೃಹತ್ ಮತ್ತು ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ. ಪಾಟೀಲ ಹೇಳಿದರು.ಭಾನುವಾರ ನಗರದಲ್ಲಿ ಆರಂಭವಾದ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ರಾಜ್ಯ ಮಟ್ಟದ ಪಂದ್ಯಾಟಗಳನ್ನು ಆಯೋಜಿಸುವುದರಿಂದ ವಿಜಯಪುರ ಜಿಲ್ಲೆಯ ಕೀರ್ತಿ ಹೆಚ್ಚುತ್ತದೆ. ಇದರಿಂದ ವಿಜಯಪುರ ನಗರಕ್ಕೆ ಹೊಸ ಓಟಲುಕ್ ಲಭ್ಯವಾಗಲಿದೆ ಎಂದರು.ಜೊತೆಗೆ ರಾಷ್ಟ ಮಟ್ಟದಲ್ಲಿನ ಕ್ರೀಡಾಕ್ಷೇತ್ರದಲ್ಲಿ ಪ್ರೋತ್ಸಾಹ ಸಿಗುತ್ತದೆ. ಯುವಪ್ರತಿಭೆಗಳು ಉತ್ತಮ ಕ್ರೀಡಾಪಟುಗಳಾಗಿ ಹೊರಹೊಮ್ಮಿ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕು ಎಂದು ಆಶಿಸಿದ ಸಚಿವರು, ಮುಂದೊಂದು ದಿನ ರಾಷ್ಟ್ರ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟ ವಿಜಯಪುರದಲ್ಲಿ ನಡೆಯಲಿ ಎಂದರು.ಈ ಹಿಂದೆ ವಿಜಯಪುರ ಜಿಲ್ಲೆ ಹಿಂದುಳಿದ ಹಾಗೂ ಬರಗಾಲ ಜಿಲ್ಲೆ ಎಂಬ ಕುಖ್ಯಾತಿಗೊಳಗಾಗಿತ್ತು. ಈಗ ವಿಜಯಪುರ ಬದಲಾಗಿದೆ. ಜಿಲ್ಲೆಯಲ್ಲಿ ನೀರಾವರಿಯಾಗಿದ್ದರಿಂದ ಭೂಮಿ ಹಚ್ಚ ಹಸಿರಿನಿಂದ ನಳನಳಿಸುತ್ತಿದೆ. ಇಂಥ ಜಿಲ್ಲೆಯಲ್ಲಿ ಈಗ ಕ್ರೀಡಾ ಚಟುವಟಿಕೆಗಳು ಗರಿಗೆದರಿವೆ. ಕ್ರೀಡಾ ಚಟುವಟಿಕೆಗಳು ಹೊಸ ಸ್ವರೂಪ ಸಿಕ್ಕಂತಾಗಿದೆ. ಹೊಸ ಓಟ್ ಲುಕ್ ಸಿಕ್ಕಂತಾಗಿದೆ ಎಂದು ಕ್ರೀಡಾಕೂಟ ಆಯೋಜಿಸಿದ ಅಸೋಸಿಯೇಶನ್‌ನವರನ್ನು ಬಣ್ಣಿಸಿದರು. ಇಂತಹ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ ಜಿಲ್ಲೆಗೆ ಹೆಮ್ಮೆ ಹಾಗೂ ಕೀರ್ತಿಯನ್ನು ತಂದಿದೆ. ವಿಜಯಪುರ ಜಿಲ್ಲೆಯು ಸೈಕ್ಲಿಂಗ್ ಸೇರಿದಂತೆ ವಿವಿಧ ಕ್ರೀಡೆಗಳಿಗೆ ಈಗಾಗಲೇ ಹೆಸರುವಾಸಿಯಾಗಿದೆ.
ಈ ರೀತಿಯ ಪಂದ್ಯಾಟಗಳನ್ನು ಆಯೋಜಿಸುವುದರಿಂದ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಕ್ರೀಡಾಕೂಟದಲ್ಲಿ ಮಹತ್ವ ಸಿಗಲಿದೆ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡುತ್ತೇವೆ ಎಂದರು.ಮಾಜಿ ಮುಖ್ಯಮಂತ್ರಿ ಎಸ್. ಬಂಗಾರ್ಪ ಅವರು ಬ್ಯಾಡ್ಮಿಂಟನ್ ಆಟಗಾರರಾಗಿದ್ದರು. ಅವರು ಮುಖ್ಯಮಂತ್ರಿಯಾಗಿದ್ದಾಗ ನಾನು ಅದೇ ಮೊದಲ ಬಾರಿಗೆ ಶಾಸಕನಾಗಿದ್ದೆ. ಅವರು ಬ್ಯಾಡ್ಮಿಂಟನ್ ಗೆ ಹೆಚ್ಚು ಒತ್ತು ನೀಡಿದ್ದರು. ಈಗ ಅವರ ಪುತ್ರ ಕುಮಾರ ಬಂಗಾರ್ಪನವರು ಯುವ ತಂಡ ಕಟ್ಟಿಕೊಂಡು ಬ್ಯಾಡ್ಮಿಂಟನ್ ಆಟೋಟಗಳನ್ನು ಮುನ್ನಡೆಸುತ್ತಿರುವುದನ್ನು ಸಚಿವರು ಪ್ರಶಂಸಿಸಿದರು. ಇಂದಿನಿಂದ ಆರಂಭವಾಗಿರುವ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟ ಯಶಸ್ವಿಯಾಗಲಿ. ಮುಂಬರುವ ದಿನಗಳಲ್ಲಿ ವಿಜಯಪುರದಲ್ಲಿ ರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಕೂಟ ಆಯೋಜಿಸಿದರೆ, ನಾನು ಸೇರಿದಂತೆ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳು ಸಕಲ ಸಹಕಾರ ನೀಡುತ್ತೇವೆ ಎಂದು ಭರವಸೆ ನೀಡಿದರು.ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಶನ್ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಕುಮಾರ ಬಂಗಾರ್ಪ ಅವರು ಮಾತನಾಡಿ, ವಿಜಯಪುರದಲ್ಲಿ ಮೊದಲ ಬಾರಿಗೆ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಬೃಹತ್ ಪ್ರಮಾಣದಲ್ಲಿ ಆಯೋಜಿಸಿದ್ದೇವೆ ಎಂದರು.ವಿಜಯಪುರದಲ್ಲಿ ನಡೆದಿರುವ ಪಂದ್ಯಾಟಕ್ಕೆ ಬಿಎಲ್ ಡಿಇ ಸಂಸ್ಥೆ, ಜಿಲ್ಲಾಡಳಿತ ಸಹಕಾರ ನೀಡಿದೆ. ಶಾಸಕರು ಹಾಗೂ ಅಧಿಕಾರಿಗಳು ಸಹಕಾರ ನೀಡಿದ್ದಾರೆ. ಇದರಿಂದಾಗಿ ವಿಜಯಪುರದಲ್ಲಿ ಆಯೋಜಿಸಿರುವ ಬ್ಯಾಡ್ಮಿಂಟನ್ ಪಂದ್ಯಾಟ ಯಶಸ್ವಿಯಾಗುವ ವಿಶ್ವಾಸವಿದೆ. ಜೊತೆಗೆ ಇಲ್ಲಿ ಕ್ರೀಡೆಗೆ ಮಹತ್ತರ ಅವಕಾಶವಿದೆ ಎಂಬುದು ಸಾಬೀತಾಗಿದೆ ಎಂದರು.
ಶಾಸಕ ವಿಠಲ ಕಟಕದೊಂಡ ಮಾತನಾಡಿ, ಈ ಪಂದ್ಯಾವಳಿಗಾಗಿ ರಾಜ್ಯದ ವಿವಿಧ ಮೂಲೆಗಳಿಂದ ಸುಮಾರು ಎರಡು ಸಾವಿರ ಕ್ರೀಡಾಪಟುಗಳು ಜಿಲ್ಲೆಗೆ ಆಗಮಿಸಿದ್ದಾರೆ.ಆ ಮೂಲಕ ಕ್ರೀಡಾಕ್ಷೇತ್ರದಲ್ಲಿ ಜಿಲ್ಲೆ ಗುರುತಿಸಿಕೊಳ್ಳುತ್ತಿದೆ. ದ್ರಾಕ್ಷಿಯ ಸಿಹಿಗೆ ಹೆಸರಾದ ನಮ್ಮ ಜಿಲ್ಲೆಯು ಈಗ ಕ್ರೀಡಾಕ್ಷೇತ್ರದಲ್ಲೂ ಮುಂಚೂಣಿಗೆ ಬರುತ್ತಿರುವುದು ಸಂತಸದ ಸಂಗತಿ. ಈ ಪಂದ್ಯಾವಳಿ ಯಶಸ್ವಿಯಾಗಲಿ ಎಂದರು.
ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಮಾತನಾಡಿ, ಯಾವುದೇ ಆಟೋಟ ಹಾಗೂ ಕಾರ್ಯಕ್ರಮಗಳಿಗೆ ನಮ್ಮ ಜಿಲ್ಲೆಯ ಆತಿಥ್ಯ ನೀಡಲಿದೆ. ಅತಿಥಿಗಳು ಬಂದರೆ, ಊಟೋಪಚಾರ ಹಾಗೂ ಸತ್ಕಾರಕ್ಕೆ ನಮ್ಮ ಜಿಲ್ಲೆ ಹೆಸರುವಾಸಿಯಾಗಿದೆ ಎಂದರು.ಕುಮಾರ ಬಂಗಾರ್ಪನವರು ಬ್ಯಾಡ್ಮಿಂಟನ್ ಪಂದ್ಯಾಟ ಆಯೋಜಿಸಿದ್ದಾರೆ. ಅವರಿಗೂ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ ಎಂದರು.ವಿವಿಧ ಕ್ರೀಡಾಕೂಟಗಳಲ್ಲಿ ವಿಜಯಪುರ ಜಿಲ್ಲೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ. ಭವಿಷ್ಯದ ದಿನಗಳಲ್ಲೂ ಯಾವುದೇ ಕ್ರೀಡೆ ನಡೆದರೂ ಸಹಕಾರ ನೀಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಗಂಗಾಧರ ಸಂಬಣ್ಣಿ, ಮೇಯರ್ ಮಡಿವಾಳಪ್ಪ ಕರಡಿ, ಸದಸ್ಯ ಪ್ರೇಮಾನಂದ ಬಿರಾದಾರ, ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ಹಕಾಧಿಕಾರಿಗಳಾದ ರಿಷಿ ಆನಂದ, ಕ್ರೀಡಾಧಿಕಾರಿ ರಾಜಶೇಖರ ದೈವಾಡಿ ಕೆಎಂಎಫ್ ಅಧ್ಯಕ್ಷರಾದ ಲಿಂಗರಾಜ ಪಾಟೀಲ, ಬಿಎಲ್‌ಡಿಇ ಉಪಕುಲಪತಿಗಳಾದ ಅರುಣ್ ಇನಾಮದಾರ, ಡಾ. ಮಹಾಂತೇಶ ಬಿರಾದಾರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಕ್ರೀಡಾಪಟುಗಳು ಕ್ರೀಡಾಸಕ್ತರು ಪಾಲ್ಗೊಂಡಿದ್ದರು.
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್ 