ಸ್ಲಂ ಜನರ ಸಾಮಾಜಿಕ ನ್ಯಾಯ ಮತ್ತು ಸಂವಿಧಾನಬದ್ದ ಹಕ್ಕುಗಾಗಿ 20ರಂದು ರಾಜ್ಯ ಮಟ್ಟದ ಸಮ್ಮೇಳನ-ಇಮ್ತಿಯಾಜ ಮಾನ್ವಿ

ಸ್ಲಂ ಜನರ ಸಾಮಾಜಿಕ ನ್ಯಾಯ ಮತ್ತು ಸಂವಿಧಾನಬದ್ದ ಹಕ್ಕುಗಾಗಿ 20ರಂದು ರಾಜ್ಯ ಮಟ್ಟದ ಸಮ್ಮೇಳನ-ಇಮ್ತಿಯಾಜ ಮಾನ್ವಿ State-level conference on 20th for social justice and constitutional rights of slum people-Imtiaz Ma

 ಲೋಕದರ್ಶನ ವರದಿ 

ಗದಗ-10, : ಸ್ಲಂ ಜನರಿಗೆ ಕಾಂಗ್ರೇಸ್ ಸರ್ಕಾರ ತಮ್ಮ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸದೇ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು 3 ವರ್ಷ ಕಳೆದು ನಾಯಕತ್ವ ಬದಲಾದರು ಸಹ ಸ್ಲಂ ಜನರ ಸಮಸ್ಯಗಳನ್ನು ನಿರ್ಲಕ್ಷ್ಯ ಮಾಡಲಾಗುತ್ತದೆ. ಹಾಗಾಗಿ ರಾಜ್ಯ ಸರ್ಕಾರದ ಗಮನ ಸೆಳೆಯಲು ಸ್ಲಂ ಜನರ ಸಾಮಾಜಿಕ ನ್ಯಾಯ ಮತ್ತು ಸಂವಿಧಾನಬದ್ದ ಹಕ್ಕುಗಾಗಿ ಸ್ಲಂ ಜನಾಂದೋಲನ-ಕರ್ನಾಟಕ ರಾಜ್ಯ ಸಮಿತಿಯಿಂದ ಜೂನ್‌-20 ರಂದು ಗದಗ ನಗರದ ಲಾಯನ್ಸ್‌ ಭವನದಲ್ಲಿ ರಾಜ್ಯ ಮಟ್ಟದ ಪ್ರತಿನಿಧಿಗಳ ಸಮ್ಮೀಳನ ನಡೆಸಲಾಗುತ್ತಿದೆ ಎಂದು ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷರಾದ ಇಮ್ತಿಯಾಜ.ಆರ್‌.ಮಾನ್ವಿ ತಿಳಿಸಿದರು. ಅವರು ರಾಚೋಟೇಶ್ವರ ನಗರ ಸ್ಲಂ ಪ್ರದೇಶದಲ್ಲಿ ಜಿಲ್ಲಾ ಸಮಿತಿ ಪದಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿ ಸರ್ವಜನಾಂಗದ ಶಾಂತಿಯ ತೋಟ ಸಾಮಾಜಿಕ ನ್ಯಾಯ ಮತ್ತು ಗ್ಯಾರಂಟಿ ಯೋಜನೆಗಳ ನೆರವಿನೊಂದಿಗೆ ಪೂರ್ಣ ಬಹುಮತದೊಂದಿಗೆ ಕಾಂಗ್ರೇಸ್ ಸರ್ಕಾರ 2023ರಲ್ಲಿ ಅಧಿಕಾರಕ್ಕೆ ಬಂದು 3 ವರ್ಷಗಳು ಕಳೆದು ಮುಖ್ಯಮಂತ್ರಿಗಳ ಬದಲಾವಣೆಯಾಗಿ ಅಧಿಕಾರ ಹಸ್ತಾಂತರ ಕೂಡ ಮಾಡಲಾಗಿದೆ.

ಆದರೆ ಕಳೆದ ಮೂರು ವರ್ಷಗಳ ಹಿಂದೆ ಕಾಂಗ್ರೇಸ್ ಪಕ್ಷದಿಂದ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಸ್ಲಂ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲಾಗಿಲ್ಲ. ರಾಜ್ಯ ಸರ್ಕಾರ ಕೊಡಲೇ ತಮ್ಮ ಪ್ರಣಾಳಿಕೆಯಲ್ಲಿ ಸ್ಲಂ ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಲು ಹಾಗೂ ಸ್ಲಂ ಜನರ ಸಾಮಾಜಿಕ ನ್ಯಾಯದಡಿಯಲ್ಲಿ ಯೋಜನೆಗಳನ್ನು ಮಂಜೂರು ಮಾಡಬೇಕೆಂದು ಆಗ್ರಹಿಸಿ ಗದಗ ನಗರದಲ್ಲಿ ರಾಜ್ಯ ಮಟ್ಟದ ಪ್ರತಿನಿಧಿಗಳ ಸಮ್ಮೇಳನ ಹಮ್ಮಿಕೊಂಡಿದ್ದು ಗದಗ ಜಿಲ್ಲಾ ಸ್ಲಂ ಸಮಿತಿ ಹಾಗೂ ನಗರದ ಶಾಖೆ ಸಮಿತಿ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಹೇಳಿದರು. ಸ್ಲಂ ಸಮಿತಿ ಮುಖಂಡರಾದ ಮೌಲಾಸಾಬ ಗಚ್ಚಿ, ಇಬ್ರಾಹಿಂ ಮುಲ್ಲಾ, ಮಹಿಳಾ ಸಮಿತಿ ಸಂಚಾಲಕಿ ಪರವೀನಬಾನು ಹವಾಲ್ದಾರ, ಶರಣಪ್ಪ ಸೂಡಿ, ಮೆಹಬೂಬಸಾಬ ಬಳ್ಳಾರಿ, ಪುಷ್ಪಾ ಬಿಜಾಪೂರ, ಶಂಕ್ರ​‍್ಪ ಹದ್ಲಿ, ಮುನ್ನಾ ಅಗಡಿ, ಗಿರಜವ್ವ ಹೊಂಬಳ, ಸಲೀಂ ಹರಿಹರ, ಮಕ್ತುಮಸಾಬ ಮುಲ್ಲಾನವರ, ಸುಶಿಲಮ್ಮ ಗೊಂದಾರ, ಮಲೇಶಪ್ಪ ಕಲಾಲ ಹಾಗೂ ಮುಂತಾದ ಸಮಿತಿ ಮುಖಂಡರು ಉಪಸ್ಥಿತರಿದ್ದರು.