ಪತ್ರಿಕಾ ಕ್ಷೇತ್ರದ ಸಾಧನೆಗೆ ನಜೀರುದ್ದಿನ ತಾಡಪತ್ರಿಗೆ ರಾಜ್ಯಮಟ್ಟದ ಸನ್ಮಾನ
State-level honour for Naziruddin Tadapatri for its achievements in the field of journalism
ಮುಂಡಗೋಡ 26: ಕರುನಾಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಸಮ್ಮೇಳನ ಬಳಗ, ಬೆಂಗಳೂರು ವತಿಯಿಂದ ಹಾವೇರಿಯಲ್ಲಿ ಆಯೋಜಿಸಿದ್ದ 2ನೇ ರಾಜ್ಯಮಟ್ಟದ ಕರುನಾಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 56 ಮಂದಿಯನ್ನು ಸನ್ಮಾನಿಸಿ ರಾಜ್ಯಮಟ್ಟದ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಉತ್ತರ ಕನ್ನಡ ಜಿಲ್ಲೆಯಿಂದ ಒಟ್ಟು ಐವರು ಸಾಧಕರು ಪ್ರಶಸ್ತಿ ಪಡೆದಿದ್ದು, ಅವರಲ್ಲಿ ಶಿಕ್ಷಣ ಇಲಾಖೆಯ ನಾಲ್ವರು ಸಿಬ್ಬಂದಿ ವಿಶೇಷವಾಗಿ ಗುರುತಿಸಿಕೊಂಡಿದ್ದಾರೆ. ಸರ್ಕಾರಿ ಜ್ಯೂನಿಯರ್ ಕಾಲೇಜಿನ ಪ್ರಾಂಶುಪಾಲ ಜಿ.ಡಿ. ಕಡೇಮನಿ, ಬಿಇಒ ಕಚೇರಿಯ ಶಿಕ್ಷಣ ಸಂಯೋಜಕ ಪಾಂಡುರಂಗ ಟಿಕ್ಕೋಜಿ,
ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಾಲಚಂದ್ರ ಹೆಗಡೆ ಹಾಗೂ ಶಿರಸಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಗಣೇಶ ಭಟ್ಟ ಅವರಿಗೆ ಪ್ರಶಸ್ತಿ ಪ್ರದಾನಿಸಲಾಯಿತು. ಇದೇ ಸಂದರ್ಭದಲ್ಲಿ ಸಾಗರ ಸಾಮ್ರಾಟ ಪತ್ರಿಕೆಯ ವರದಿಗಾರ ನಜೀರುದ್ದಿನ ತಾಡಪತ್ರಿ ಅವರಿಗೆ ಪತ್ರಿಕಾ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಹಾಗೂ ಸಾಧನೆಯನ್ನು ಗುರುತಿಸಿ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಜ್ಯಮಟ್ಟದ 2ನೇ ಕರುನಾಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪಡೆದ ರಾಜ್ಯದ ಏಕೈಕ ಪತ್ರಕರ್ತ ನಜೀರುದ್ದಿನ ತಾಡಪತ್ರಿ ಎಂದು ಸಂಸ್ಥೆಯ ರಾಜ್ಯಾಧ್ಯಕ್ಷ ಎಸ್.ಡಿ. ಮುಡೇಣ್ಣವರ ತಿಳಿಸಿದ್ದಾರೆ. ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ನಜೀರುದ್ದಿನ ತಾಡಪತ್ರಿ ಅವರಿಗೆ ಪ್ರಶಸ್ತಿ ಲಭಿಸಿರುವುದು ಉತ್ತರ ಕನ್ನಡ ಜಿಲ್ಲೆ ಹಾಗೂ ಮುಂಡಗೋಡ ತಾಲೂಕಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಡಿಎಸ್ಎಸ್ ರಾಜ್ಯ ಸಂಚಾಲಕ ಎಸ್. ಫಕ್ಕಿರ್ಪ ಅಭಿಪ್ರಾಯಪಟ್ಟರು.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರುನಾಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಬಳಗದ ಸಂಸ್ಥಾಪಕ ರಾಜ್ಯಾಧ್ಯಕ್ಷ ಎಸ್.ಡಿ. ಮುಡೇಣ್ಣವರ, ಬ್ಯಾಡಗಿ ಕ್ಷೇತ್ರದ ಮಾಜಿ ಶಾಸಕ ಶಿವರಾಜ ಸಜ್ಜನ, ಸಾಹಿತಿ ಸತೀಶ ಕುಲಕರ್ಣಿ, ಡಿಎಸ್ಎಸ್ ರಾಜ್ಯ ಸಂಚಾಲಕ ಹಾಗೂ ಮುಂಡಗೋಡ ತಾಲೂಕು ನಿಕಟಪೂರ್ವ ಕಸಾಪ ಸಮ್ಮೇಳನಾಧ್ಯಕ್ಷ ಎಸ್. ಫಕ್ಕಿರ್ಪ, ಪ್ರಿಕಾಂಕ್ ನಡುವಿನಮನಿ, ಸರಸ್ವತಿ ಬೊಮ್ಮನಾಳ, ಡಾ. ಶೆಲ್ವಿ, ಕುಮಾರ ತಳವಾರ, ತಾಲೂಕು ಕಸಾಪ ಅಧ್ಯಕ್ಷ ವಸಂತ ಕೊಣಸಾಲಿ, ಡಾ. ಪಿ.ಪಿ. ಛಬ್ಬಿ, ಎಸ್.ಕೆ. ಬೋರ್ಕರ, ಗೌರಮ್ಮಾ ಕೊಳ್ಳಾನವರ, ಎಂ.ಎಚ್. ಕಲಾಲ್, ಇಂದೂರ ಪ್ರೌಢಶಾಲೆಯ ಶಿಕ್ಷಕ ಕೃಷ್ಣ ಗುಜಮಾಗಡಿ, ಡಿಎಸ್ಎಸ್ ಸಂಘಟನೆಯ ಲಕ್ಷ್ಮಣ ವಾಯ್.ಬಿ. ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 