ಹೋರಾಟ ಮತ್ತು ಸಮಾಜಸೇವೆಗೆ ರಾಜ್ಯಮಟ್ಟದ ಸನ್ಮಾನ
State-level honour for activism and social service
ಲೋಕದರ್ಶನ ವರದಿ
ಹಾವೇರಿ, ಜು.20: ನಿರಂತರ ಹೋರಾಟ ಹಾಗೂ ಜನಸಾಮಾನ್ಯರ ಸೇವೆಯನ್ನು ಗುರುತಿಸಿ ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಪರಿಶಿಷ್ಟ ಪಂಗಡ ಮಹಿಳಾ ಸಬಲೀಕರಣ ಹೋರಾಟ ಸಮಿತಿ (ರಿ) ಹಾಗೂ ಕರ್ನಾಟಕ ್ಮ್ಘ್ಕೂಹಿ್ಮ್ಘೂಸ ಮಹಿಳಾ ಕ್ಷೇಮಾಭಿವೃದ್ಧಿ ಸಂಘ (ರಿ) ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ಬೃಹತ್ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿದವರು ಆಯೋಜಕರಿಗೆ ಕೃತಜ್ಞತೆ ಸಲ್ಲಿಸಿ, ಈ ಗೌರವವು ಸಮಾಜಸೇವೆಯಲ್ಲಿ ಇನ್ನಷ್ಟು ತೊಡಗಿಸಿಕೊಳ್ಳಲು ಪ್ರೇರಣೆ ನೀಡಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಿಹಾರ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಪವನ್ ಕುಮಾರ್ ಭಜಂತ್ರಿ, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಶ್ರೀಮತಿ ನಾಗಲಕ್ಷ್ಮಿ ಚೌಧರಿ, ಮಾಜಿ ಸಚಿವೆ ಶ್ರೀಮತಿ ಮೋಟಮ್ಮ, ಡಾ. ಭೀಮಪುತ್ರಿ ನಾಗಮ್ಮ, ವಕೀಲ ಕಿರಣಕುಮಾರ್ ಕೊತ್ತಗೆರೆ, ಚಾಮರಾಜನಗರದ ಮಹದೇವ, ಬಿಬಿಎಂಪಿ ಜಂಟಿ ಆಯುಕ್ತೆ ಕೆ. ದಾಕ್ಷಾಯಿಣಿ, ಡಿವೈಎಸ್ಪಿ ಹನುಮಂತ ಭಜಂತ್ರಿ, ನಿವೃತ್ತ ಆಡಿಟರ್ ಜನರಲ್ ಮುನಿರತ್ನಪ್ಪ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 