ನಡುವಿನಕೇರಿಗೆ ರಾಜ್ಯಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ

ನಡುವಿನಕೇರಿಗೆ ರಾಜ್ಯಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ  State-level ideal teacher award for Naduvinakeri

ತಾಳಿಕೋಟಿ 09: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಘಟಕ ವಿಜಯಪುರ ಇವರು ಕೊಡ ಮಾಡುವ "ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ" ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಸ್ಥಳೀಯ ಎಚ್ ಎಸ್ ಪಾಟೀಲ ಮಹಿಳಾ ಕಲಾ ವಾಣಿಜ್ಯ ಹಾಗೂ ವಿಜ್ಞಾನ ಪದವಿ ಮಹಾ ವಿದ್ಯಾಲಯದ ಪ್ರಾಚಾರ್ಯ ಡಾ.ಎಚ್ ಬಿ ನಡುವಿನಕೇರಿ ಇವರಿಗೆ ಪ್ರಧಾನ ಮಾಡಲಾಗಿದೆ.  

ಡಾ.ನಡುವಿನಕೇರಿ ಅವರು ಶೈಕ್ಷಣಿಕ ಸೇವೆ, ಸಾಹಿತ್ಯ ಸಮಾಜಮುಖಿ ಕಾರ್ಯಗಳು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗಳಲ್ಲಿ ಹಾಗೂ ಅನೇಕ ಶಿಕ್ಷಣ ಸಂಸ್ಥೆಗಳಲ್ಲಿ ಉತ್ತಮ ಶಿಕ್ಷಕ ರಾಗಿ ಸೇವೆ ಯನ್ನು ಸಲ್ಲಿಸಿದ್ದು ಇವರ ಸೇವೆಯನ್ನು ಗುರುತಿಸಿ  ಕನಾ9ಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧ್ಯಕ್ಷ ಗಣೇಶ ಕಾಂಬಳೆ ಇವರು ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ವೇದಿಕೆಯ ಎಲ್ಲಾ ಗಣ್ಯರ ಸಮ್ಮುಖದಲ್ಲಿ ಫೆಬ್ರವರಿ 8ರಂದು ಸಾವಿತ್ರಿಬಾಯಿ ಫುಲೆ ಜಯಂತಿಯ ನಿಮಿತ್ತವಾಗಿ ವಿಜಾಪುರದ ಮಾನಸಗಂಗೋತ್ರಿ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಲ್ಲಿ ಹಮ್ಮಿಕೊಂಡ ಶೈಕ್ಷಣಿಕ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.    

ಅಭಿನಂದನೆ: ಪಟ್ಟಣದ ಎಸ್ ಎಸ್ ವಿದ್ಯಾ ಸಂಸ್ಥೆಯಲ್ಲಿ ಪ್ರಾಚಾರ್ಯರಿಗೆ ಸೇವೆ ಸಲ್ಲಿಸುತ್ತಿರುವ ಡಾ. ನಡುವಿನಕೆರೆಯವರಿಗೆ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿರುವದಕ್ಕಾಗಿ ಸಂಸ್ಥೆಯ ಅಧ್ಯಕ್ಷ ಹೆಚ್ ಎಸ್ ಪಾಟೀಲ, ಕಾರ್ಯದರ್ಶಿ ಸುನಿಲ್ ಎಚ್ ಪಾಟೀಲ, ಸಿಬ್ಬಂದಿ ವರ್ಗದವರು ಮತ್ತು ಪದವಿ ಕಾಲೇಜಿನ ಉಪನ್ಯಾಸಕ ಸುರೇಶ ಪಾಟೀಲ ಪಿಎಂ ಚಲವಾದಿ, ಆರ್ ಆರ್ ಬಡಗಣ ಇತರರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.