ಪಟ್ಟಣದಲ್ಲಿ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿ
State-level karate tournament in the town
ಬ್ಯಾಡಗಿ 31: ಪಟ್ಟಣದ ಶ್ರೀ ಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಚಿಲ್ಲಿ ಸ್ಪೋರ್ಟ್ಸ ಕ್ಲಬ್ ವತಿಯಿಂದ ರಾಜತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯನ್ನು ಮಾಜಿ ಶಾಸಕ ಸುರೇಶ್ ಗೌಡ ಪಾಟೀಲ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರಾಟೆ ಕೇವಲ ಆತ್ಮರಕ್ಷಣೆಯ ಕಲೆಯಲ್ಲ; ಶಿಸ್ತು, ಏಕಾಗ್ರತೆ, ಆತ್ಮವಿಶ್ವಾಸ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ ಕ್ರೀಡೆಯಾಗಿದೆ. ಇಂದಿನ ಯುವಜನರು ಕ್ರೀಡೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳುವ ಮೂಲಕ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.
ತರಬೇತುದಾರ ನಾರಾಯಣ ಪೂಜಾರ ಮಾತನಾಡಿ, ಕರಾಟೆ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವ ಉತ್ತಮ ಕ್ರೀಡೆಯಾಗಿದ್ದು, ಮಕ್ಕಳಿಗೆ ಬಾಲ್ಯದಿಂದಲೇ ತರಬೇತಿ ನೀಡುವುದರಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಲು ಸಾಧ್ಯ. ವಿದ್ಯಾರ್ಥಿಗಳು ಕ್ರೀಡೆಯೊಂದಿಗೆ ಶಿಕ್ಷಣಕ್ಕೂ ಸಮಾನ ಆದ್ಯತೆ ನೀಡಬೇಕು ಎಂದರು.
ಪಂದ್ಯಾವಳಿಯಲ್ಲಿ ವಿವಿಧ ವಯೋಮಾನದ ಕ್ರೀಡಾಪಟುಗಳು ಭಾಗವಹಿಸಿದ್ದು, ವಿಜೇತರಿಗೆ ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ರವಿ ಪೂಜಾರ, ರ. ಶೇಖರಗೌಡ ಪಾಟೀಲ್, ಅಬ್ದುಲ್ ಮುನಾಫ್, ಯರೇಸಿಮಿ, ದತ್ತಾತ್ರೇಯ ಸಾಳುಂಕಿ, ಜೀವರಾಜ್ ಛತ್ರದ, ಸುಭಾಷ್ ಮಾಳಗಿ, ಮನೀಷಾ ಕಬೂರ್ ಹಾಗೂ ಕೋಟ್ರೇಶ್ ಸೊಪ್ಪಿನ ಮಠ ಸೇರಿದಂತೆ ಕ್ರೀಡಾಪಟುಗಳು ಮತ್ತು ಪೋಷಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 