ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆ: ಬಿಮ್ಸ್‌ ತಂಡಕ್ಕೆ ಪ್ರಥಮಬಹುಮಾನ

ಬೆಳಗಾವಿ 24 : ಭಾರತೀಯ ರೋಗಶಾಸ್ತ್ರಜ್ಞರು ಮತ್ತು ಸೂಕ್ಷ್ಮ ಜೀವಶಾಸ್ತ್ರಜ್ಞರ ಸಂಘವು ಬೆಂಗಳೂರಿನ ರಾಮಯ್ಯ ವೈದ್ಯಕೀಯ ಕಾಲೇಜಿನಲ್ಲಿ ಇತ್ತೀಚೆಗೆ ಏರಿ​‍್ಡಸಿದ್ದ ರಾಜ್ಯಮಟ್ಟದ ರಸಪ್ರಶ್ನೆ ಪರೀಕ್ಷೆಯಲ್ಲಿ ಬಿಮ್ಸ್‌ ಎಂಬಿಬಿಎಸ್ ವಿದ್ಯಾರ್ಥಿಗಳು ಪ್ರಥಮ ಬಹುಮಾನವನ್ನು ಪಡೆದುಕೊಂಡಿರುತ್ತಾರೆ.  

ಬೆಂಗಳೂರಿನಲ್ಲಿ ನಡೆದ ವಾರ್ಷಿಕ ರಾಜ್ಯ ಮಟ್ಟದ ಏಅಋಕಒ ಪದವಿ ಪೂರ್ವ ರೋಗಶಾಸ್ತ್ರ ರಸಪ್ರಶ್ನೆ ಪರೀಕ್ಷೆಯಲ್ಲಿ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಾದ ಶುಭಿ ಅಗರವಾಲ್ ಹಾಗೂ ಹರ್ಷಿತ ನಾಯರ್ ಪ್ರಥಮ ಬಹುಮಾನವನ್ನು ಪಡೆದುಕೊಂಡಿದ್ದಾರೆ. ರಾಜ್ಯಾದ್ಯಂತ ವಿವಿಧ ಕಾಲೇಜುಗಳಿಂದ ಒಟ್ಟು 65 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.  

ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗೆಲ್ಲುವ ಮೂಲಕ "ಆಸ್ಕರ್ ಟ್ರೋಫಿ"ಯನ್ನು ಪಡೆದುಕೊಳ್ಳುವಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಜ್ಞಾನ ಮತ್ತು ಅತ್ಯುತ್ತಮ ಸ್ಪರ್ಧಾತ್ಮಕ ಮನೋಭಾವವನ್ನು ಪ್ರದರ್ಶಿಸಿದರು. ಪ್ರತಿಷ್ಟಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ವಿದ್ಯಾರ್ಥಿಗಳು ಬಿಮ್ಸ್‌ ಗೆ ಕೀರ್ತಿ ತಂದಿದ್ದಾರೆ ಎಂದು ಬೆಳಗಾವಿ ಬಿಮ್ಸ್‌ ನಿರ್ದೇಶಕರಾದ ಡಾ. ಅಶೋಕ್ ಕುಮಾರ್ ಶೆಟ್ಟಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  

ಬಿಮ್ಸ್‌ ನಿರ್ದೇಶಕರಾದ ಡಾ. ಅಶೋಕ್ ಕುಮಾರ್ ಶೆಟ್ಟಿ, ಪ್ರಾಧ್ಯಾಪಕರು ಹಾಗೂ ಪ್ಯಾಥೊಲಾಜಿ ವಿಭಾಗದ ಮುಖ್ಯಸ್ಥರಾದ ಡಾ. ರೇಖಾ ಹರವಿ ಹಾಗೂ ಎಲ್ಲಾ ಬೋಧಕ ಸಿಬ್ಬಂದಿಗಳು ಬಹುಮಾನ ವಿಜೇತ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.